ಟಾಪ್ 10ತಾಜಾ ವರದಿ ಈ ಮಧ್ಯಾಹ್ನದ ಹೆಡ್ ಲೈನ್ By ಕನ್ನಡಪ್ರೆಸ್.ಕಾಮ್ ವರದಿ - June 19, 2021 1 408 FacebookTwitterPinterestWhatsApp ರಾಜ್ಯದ ಹಲವೆಡೆ ಪ್ರವಾಹ ಸ್ಥಿತಿ. ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಡಿಸಿಗಳೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಭೆ ನಡೆಸಿದರು. ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಡಿಸೆಂಬರ್ ವರೆಗಂತೂ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲ್ಲ ಅಂತ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಯಾರು ಮಾತನಾಡಬಾರದು. ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಿವರಾಜ್ ಕುಮಾರ್ ಚಿತ್ರಯಾತ್ರೆಗೆ ಇಂದು 35 ವರ್ಷ. ಶಿವಣ್ಣನ ಮೊದಲ ಚಿತ್ರ ಬಿಡುಗಡೆಯಾಗಿದ್ದು 1986ರ ಜೂನ್ 19. ದೇಶ ಅಮೆರಿಕದ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಜನಪ್ರಿಯ ನಾಯಕರಾಗಿ ಹೊರ ಹೊಮ್ಮಿದ್ದಾರೆಂದು ಬಿಜೆಪಿ ಟ್ವೀಟ್ ಮಾಡಿ ತಿಳಿಸಿದೆ. ಕೊರೊನಾ ಸೋಂಕಿನ ವಿರುದ್ಧ ನಿರಂತರ ಹೋರಾಟ ನಡೆಸುತ್ತಾ ಬಂದಿರುವ ಭಾರತ ಸರ್ಕಾರ, ಇದೀಗ ಸೋಂಕಿನ ಪ್ರಮಾಣವನ್ನು ಗಣನೀಯವಾಗಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗುತ್ತಿದೆ. ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಪ್ರಮಾಣ ಇದೀಗ 8 ಲಕ್ಷ ಮಟ್ಟಕ್ಕಿಂತ ಕೆಳಕ್ಕೆ ತಗ್ಗಿದ್ದು, ಅದೀಗ 74 ದಿನಗಳ ನಂತರ 7,60,019ಕ್ಕೆ ಇಳಿಕೆ ಕಂಡಿದೆ
Nice style