26.1 C
Karnataka
Sunday, April 28, 2024

    ಬಾಕಿ ಇರುವ ಡಿಗ್ರಿ, ಡಿಪ್ಲೊಮೊ ಪರೀಕ್ಷೆಗಳನ್ನು ಬೇಗ ಮುಗಿಸಲು ಸೂಚನೆ

    Must read

    ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಬಹು ಬೇಗನೆ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಎಲ್ಲ ವಿಶ್ವವಿದ್ಯಾಲಯ ಹಾಗೂ ಪಾಲಿಟೆಕ್ನಿಕ್‌ಗಳಿಗೆ ಸೂಚನೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಶುಕ್ರವಾರದಂದು ಪರೀಕ್ಷೆಗಳು ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಮಂಡಳಿ ಸದಸ್ಯರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು.

    ಡಿಪ್ಲೊಮಾ ಪರೀಕ್ಷೆ

    ಬೆಸ ಸೆಮಿಸ್ಟರ್‌ಗಳ (1, 3 & 5) ಡಿಪ್ಲೊಮಾ ಪ್ರಾಯೋಗಿಕ ಪರೀಕ್ಷೆಗಳು ಜುಲೈ 26ರಿಂದ 28 ಮತ್ತು ಇವೇ ಸೆಮಿಸ್ಟರ್‌ಗಳ ಉಳಿದ ವಿಷಯಗಳ ಥಿಯರಿ ಪರೀಕ್ಷೆಗಳು ಮತ್ತಿತರೆ ಸೆಮಿಸ್ಟರ್‌ಗಳ ಪರೀಕ್ಷೆಗಳು ಆಗಸ್ಟ್ 2ರಿಂದ 21ರವರೆಗೆ ನಡೆಸಲು ಸೂಚಿಸಲಾಗಿದೆ.

    ಇನ್ನು ಸಮ ಸೆಮಿಸ್ಟರ್‌ಗಳಾದ 2, 4 & 6ರ ಡಿಪ್ಲೊಮಾ ಪ್ರಾಯೋಗಿಕ ಪರೀಕ್ಷೆಗಳನ್ನು ನವೆಂಬರ್‌ 2ರಿಂದ 12ರವರೆಗೆ ಹಾಗೂ ಇವೇ ಸೆಮಿಸ್ಟರ್‌ಗಳ ಥಿಯರಿ ಪರೀಕ್ಷೆಗಳನ್ನು ನವೆಂಬರ್ 17ರಿಂದ ಡಿಸೆಂಬರ್‌ 6ರವರೆಗೆ ನಡೆಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

    ಪದವಿ ಪರೀಕ್ಷೆ

    ಬಹುತೇಕ ಎಲ್ಲ ವಿವಿಗಳು ಪರೀಕ್ಷೆಗಳನ್ನು ಮುಗಿಸಿದ್ದು, ಕೋವಿಡ್‌ ಲಾಕ್‌ಡೌನ್‌ ಕಾರಣಕ್ಕೆ ಕರ್ನಾಟಕ ವಿವಿ, ಕಲಬುರಗಿ ವಿವಿ, ಬೆಂಗಳೂರು ವಿವಿ ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ಇದರಲ್ಲಿ ಬಾಕಿ ಇರುವ ಬೆಸ ಸೆಮಿಸ್ಟರ್ ಗಳ ಪರೀಕ್ಷೆಯನ್ನು ಆಗಸ್ಟ್ 15ರೊಳಗೆ ಹಾಗೂ ಸಮ ಸೆಮಿಸ್ಟರ್ ಗಳ ಪರೀಕ್ಷೆಯನ್ನು ಅಕ್ಟೋಬರ್ ಒಳಗೆ ಮುಗಿಸುವಂತೆ ಸೂಚಿಸಲಾಗಿದೆ.

    ಎಲ್ಲ ಪರೀಕ್ಷೆಗಳಲ್ಲೂ ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯ. ದೈಹಿಕ ಅಂತರ, ಮಾಸ್ಕ್‌ ಧರಿಸುವುದನ್ನು ತಪ್ಪಿಸುವಂತಿಲ್ಲ. ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಪಾಸಿಟೀವ್‌ ಬಂದಿದ್ದರೆ ಅಂಥರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಆದೇಶಿಸಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

    ಕಾಲೇಜು ಆರಂಭ; ಇನ್ನೆರಡು ದಿನದಲ್ಲಿ ನಿರ್ಧಾರ:

    ಉನ್ನತ ಶಿಕ್ಷಣ ವಿಭಾಗದ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

    ಈಗಾಗಲೇ ಶೇ.65ರಷ್ಟು ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗಿದೆ. ಸರಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳ ಸರಕಾರಿ ತೆಗೆದುಕೊಂಡರೆ ಶೇ.75ರಷ್ಟು ವಿದ್ಯಾರ್ಥಿಗಳು ವ್ಯಾಕ್ಸಿನ್‌ ಪಡೆದಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಶೀಘ್ರವೇ ನೀಡಲಾಗುವುದು. ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಲಸಿಕೀಕರಣ ಭರದಿಂದ ಸಾಗುತ್ತಿದೆ ಎಂದರು ಅವರು.

    ಆಫ್‌ಲೈನ್‌ ಕ್ಲಾಸ್‌ ಕಡ್ಡಾಯ ಅಲ್ಲ. ಇಷ್ಟ ಇದ್ದವರು ಲಸಿಕೆ ಪಡೆದು ಬರಬಹುದು, ಇಲ್ಲದವರು ಆನ್‌ಲೈನ್‌ ಕ್ಲಾಸ್‌ನಲ್ಲಿ ಪಾಠ ಕೇಳಬಹುದು. ಆದರೆ, ಹಾಜರಿ ಮಾತ್ರ ಕಡ್ಡಾಯ. ಮೇ ತಿಂಗಳಿಂದಲೇ ಆನ್‌ಲೈನ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಜತೆಗೆ, ಸಂಪರ್ಕ ತರಗತಿಗಳೂ ನಡೆಯುತ್ತಿವೆ. ಆಗಸ್ಟ್‌ 15ರಿಂದ ಬರುವ ವಿದ್ಯಾರ್ಥಿಗಳಿಗೂ ಸಂಪರ್ಕ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

    ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್‌, ಉನ್ನತ ಶಿಕ್ಷಣ ಮಂಡಳಿ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್‌ ಮುಂತಾದವರು ಭಾಗಿಯಾಗಿದ್ದರು.

    spot_img

    More articles

    5 COMMENTS

    1. 3ನೇ ಅಲೆ ಹೆಚ್ಚಿತ್ತಿರುವ ಸಂದರ್ಭದಲ್ಲಿ ಪರೀಕ್ಷೆಯನ್ನು ನಡೆಸುವುದು ಒಳ್ಳೆಯ ತೀರ್ಮಾನ ಅಲ್ಲ ಏಕೆಂದರೆ ಅದು ಮಕ್ಕಳಲ್ಲಿ ಕಂಡುಬರುತ್ತಿರುವುದರಿಂದ ಪರೀಕ್ಷೆಯ ವೇಳೆಯಲ್ಲಿ ಸೋಂಕು ಹರಡುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಮತ್ತು ನಾವು vaccination ಹಾಕಿಕೊಂಡಿದ್ದರು ಸೋಂಕು ತಗುಳುವುದಿಲ್ಲ ಎಂದು ಯಾರು ಹೇಳಿಲ್ಲ. ಹಾಗಾಗಿ ಹಿಂದಿನ ವರುಷದಂತೆ ಕೊನೆಯ ವ್ಯಾಸಂಗದವರಿಗೆ ಪರೀಕ್ಷೆಯನ್ನು ಏರ್ಪಡಿಸಿ ಉಳಿದವರಿಗೆ direct pass ಮಾಡಬಹುದು ಎಂದು ನನ್ನ ಅಭಿಪ್ರಾಯ…. Plz 3ನೇ ಅಲೆಯನ್ನು ತಡೆಯೋಣ ಹೊರತು ಹಿಂದಿಂನಂತೆ ತಪ್ಪು ಮಾಡುವುದನ್ನು ನಿಲ್ಲಿಸೋಣ… 🙏🙏🙏🙏

    LEAVE A REPLY

    Please enter your comment!
    Please enter your name here

    Latest article

    error: Content is protected !!