guest lectures ಬೇಡಿಕೆ: ಸಚಿವರನ್ನು ಭೇಟಿಯಾದ ಸಂಘಟನೆ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಪ್ರತಿನಿಧಿಗಳು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಶುಕ್ರವಾರ ಭೇಟಿಯಾಗಿ, ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಾ.ರಘು ಅಕಮಂಚಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಇದ್ದರು.

BENGALURU JAN 7

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ನಿಯೋಗವು ಶುಕ್ರವಾರ ಇಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ, ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಿತು. ಜೊತೆಗೆ, ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುವಂತೆ ನಿಯೋಗವು ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಕೂಡ ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, `ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ಸದಸ್ಯರು, ಅತಿಥಿ ಉಪನ್ಯಾಸಕರ ಸಂಘಟನೆಗಳು ಮತ್ತು ಸಂಬಂಧಿಸಿದ ಎಲ್ಲರೊಂದಿಗೂ ಚರ್ಚಿಸಿ, ಶೀಘ್ರದಲ್ಲೇ ಪರಿಹಾರ ಕಂಡುಹಿಡಿಯಲಾಗುವುದು’ ಎಂದು ಭರವಸೆ ನೀಡಿದರು.

ನಿಯೋಗದಲ್ಲಿ ಸಂಘಟನೆಯ ಅಧ್ಯಕ್ಷ ಡಾ. ರಘು ಅಕಮಂಚಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಎಬಿವಿಪಿ ಮುಖಂಡರಾದ ಸ್ವಾಮಿ ಮೊದಲಾದವರು ಇದ್ದರು.

LEAVE A REPLY

Please enter your comment!
Please enter your name here