33.3 C
Karnataka
Tuesday, May 14, 2024

    ಪಠ್ಯಪುಸ್ತಕ ಪರಿಷ್ಕರಣೆ- ವರದಿ ಪರಿಶೀಲನೆಯ ನಂತರ ಶೀಘ್ರದಲ್ಲಿ ತೀರ್ಮಾನ -ಸಿಎಂ

    Must read

    UDUPI JUNE 1

    ಪಠ್ಯಪುಸ್ತಕ ಪರಿಷ್ಕರಣೆಯ ವರದಿ ಪರಿಶೀಲನೆಯ ನಂತರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

    ಇಂದು ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಅಂಗವಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

    ಪಠ್ಯಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿದಂತೆ, ಈಗಾಗಲೇ ಪಠ್ಯದಲ್ಲಿರುವ ಪಾಠಗಳನ್ನು ತೆಗೆಯುವಂತೆ ಕೆಲ ಸಾಹಿತಿಗಳು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಸಮಗ್ರ ವರದಿಯನ್ನು ಕೇಳಲಾಗಿದೆ. ಸ್ವಾಮೀಜಿಗಳು ಹಾಗೂ ಇತರರ ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು. ಈ ಎಲ್ಲ ವಿಚಾರಗಳ ಬಗ್ಗೆ ಸಮಗ್ರ ವರದಿ ಹಾಗೂ ವಾಸ್ತವಾಂಶವನ್ನು ತಿಳಿಸುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ವರದಿ ಪಡೆದು, ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ನಾಳೆ ವರದಿ ದೊರೆಯಲಿದ್ದು, ಪಠ್ಯಗಳನ್ನು ವಾಪಸ್ಸು ಪಡೆಯುತ್ತೇವೆ ಎನ್ನುವ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

    ಎಸಿಬಿ ಈಗಾಗಲೇ ಬಲವರ್ಧನೆಯಾಗಿದೆ. ಲೋಕಾಯುಕ್ತ ಇದ್ದರೂ , ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಎಸಿಬಿ ಆ ಅಧಿಕಾರವಿದೆ ಎಂದರು.

    ಲವ್ ಜಿಹಾದ್ ಕರಾವಳಿ ಭಾಗದಲ್ಲಿ ಮತ್ತೊಮ್ಮೆ ಸದ್ದುಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಇದಕ್ಕಾಗಿ ಕಾನೂನು ರೂಪಿಸಲಾಗಿದ್ದು, ಯಾರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದರು.

    ಹೆಬ್ರಿ ನೂತನ ಆಡಳಿತ ಸೌಧ ಲೋಕಾರ್ಪಣೆ
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು. ಹೆಬ್ರಿ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

    ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್ , ಗೋವಿಂದ ಕಾರಜೋಳ , ಸುನಿಲ್ ಕುಮಾರ್ , ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಸುಕುಮಾರ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ, ರಾಜ್ಯ ಗೇರು ಬೀಜ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಇತರರು ಉಪಸ್ಥಿತರಿದ್ದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!