23.5 C
Karnataka
Friday, May 10, 2024

    ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಪೆಷಲಿಸ್ಟ್ ಅಧಿಕಾರಿಗಳ ಹುದ್ದೆಗಳಿಗೆ ಅಧಿಸೂಚನೆ

    Must read

    ಬ್ಯಾಂಕಿಂಗ್‌ ಸಿಬ್ಬಂದಿ ನೇಮಕಾತಿ ಸಂಸ್ಥೆ(ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್‌ ಪರ್ಸೋನಲ್ ಸೆಲೆಕ್ಷನ್- ಐಬಿಪಿಎಸ್) ಸ್ಪೇಶಲಿಸ್ಟ್ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಗೆ (ಸಿಆರ್‌ಪಿ) ಅರ್ಜಿ ಆಹ್ವಾನಿಸಿದ್ದು, ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳು ಪಾಲ್ಗೊಳ್ಳುತ್ತಿವೆ.

    ಯಾವ್ಯಾವ ಹುದ್ದೆಗಳು?

    ಐಟಿ ಆಫೀಸರ್ -44

    ಅಗ್ರಿಕಲ್ಬರಲ್ ಫೀಲ್ಡ್ ಆಫೀಸರ್ -516

    ರಾಜ್ಭಾಷಾ ಅಧಿಕಾರಿ -25

    ಲಾ ಆಫೀಸರ್ -10

    ಎಚ್ಆರ್/ಪರ್ಸನಲ್ ಆಫೀಸರ್ – 15

    ಮಾರ್ಕೆಟಿಂಗ್ ಆಫೀಸರ್ -100

    ಯಾವ್ಯಾವ ಬ್ಯಾಂಕ್ಗಳಲ್ಲಿ ಹುದ್ದೆ?

    • ಬ್ಯಾಂಕ್ ಆಫ್ ಬರೋಡ
    • ಬ್ಯಾಂಕ್ ಆಫ್ ಮಹಾರಾಷ್ಟ್ರ,
    • ಬ್ಯಾಂಕ್ ಆಫ ಇಂಡಿಯಾ
    • ಕೆನರಾಬ್ಯಾಂಕ್
    • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
    • ಇಂಡಿಯನ್ ಬ್ಯಾಂಕ್
    • ಇಂಡಿಯನ್ ಒವರಸೀಸ್ ಬ್ಯಾಂಕ್
    • ಪಂಜಾಬ್ ನ್ಯಾಷನಲ್ ಬ್ಯಾಂಕ್
    • ಪಂಜಾಬ್ ಆ್ಯಂಡ್ ಸಿಂದ್ ಬ್ಯಾಂಕ್
    • ಯುಕೋ ಬ್ಯಾಂಕ್
    • ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

    ಅರ್ಜಿ ಶುಲ್ಕ:

    ಸಾಮಾನ್ಯ, ಒಬಿಸಿ  ಹಾಗೂ ಇತರ ಅಭ್ಯರ್ಥಿಗಳಿಗೆ: 850 ರೂ.

    ಪ.ಜಾ, ಪ.ಪಂ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ,ಹಾಗೂ ಮಾಜಿ ಯೋಧರಿಗೆ 175 ರೂ.

    ಶುಲ್ಕಪಾವತಿ:

    ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಆನ್‌ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

    ಅರ್ಜಿ ಸಲ್ಲಿಕೆ ವಿಧಾನ:

    ಆನ್ ಲೈನ್ ನಲ್ಲಿ ಮಾತ್ರ.

    ಪ್ರಮುಖ ದಿನಾಂಕಗಳು:

    ನವೆಂಬರ್ 1 ರಿಂದ  ನವೆಂಬರ್ 21, 2022 ರವರೆಗೆ.

    ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳೆಲ್ಲಿ:

    ಪೂರ್ವಭಾವಿ ಪರೀಕ್ಷೆ(ಪ್ರಿಲಿಮ್ಸ್)

    ಬೆಳಗಾವಿ, ಬೆಂಗಳೂರು, ಬೀದರ್, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

    ಮುಖ್ಯ ಪರೀಕ್ಷೆ:

    ಬೆಂಗಳೂರು ಮತ್ತು ಹುಬ್ಬಳ್ಳಿ

    ವಯೋಮಿತಿ:

    01.11.2022 ಕ್ಕೆ ಕನಿಷ್ಠ 20 ವರ್ಷ  ಹಾಗೂ ಗರಿಷ್ಡ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 02.11.1992 ಕ್ಕಿಂತ ಮುಂಚಿತವಾಗಿ ಮತ್ತು 01.11.2002 ನಂತರ ಜನಿಸಿರಬಾರದು.

    ವಯೋಮಿತಿ ಸಡಿಲಿಕೆ:

    .ಜಾ, .ಪಂ ಅಭ್ಯರ್ಥಿಗಳು: 5 ವರ್ಷಗಳು

    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು

    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು.

    ಪರೀಕ್ಷಾ ಪ್ರಕ್ರಿಯೆ:

    ಮೊದಲ ಹಂತ: ಆನ್ಲೈನ್ ಪೂರ್ವಭಾವಿ ಪರೀಕ್ಷೆ

    ಡಿಸೆಂಬರ್ 24 / 31,2022 ರಂದು.

    ಎರಡನೇ ಹಂತ: ಆನ್ಲೈನ್ ಮುಖ್ಯ ಪರೀಕ್ಷೆ

    ಜನೇವರಿ 29,2023.

    ಮೂರನೇ ಹಂತ:ಸಂದರ್ಶನ

    ಪೆಬ್ರವರಿಮಾರ್ಚ್ 2023.

    * ಪ್ರಾತಿನಿಧಿಕ ಹಂಚಿಕೆ: ಏಪ್ರಿಲ್ 2023

    ನೇಮಕಾತಿ ಹೇಗೆ?

    ನೇಮಕಾತಿ ಮೂರು ಹಂತಗಳಲ್ಲಿ ನಡೆಯಲಿದೆ, ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಇರಲಿದೆ.

    ಆನ್‌ಲೈನ್‌ನಲ್ಲಿ ಅರ್ಹತೆ ಪಡೆಯುವ ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್ ಮಾಡಲಾಗುವುದು. ಅವರು ಮುಖ್ಯ ಪರೀಕ್ಷೆಗೆ  ಹಾಜರಾಗಬೇಕು, ನಂತರ ಅಲ್ಲಿ ಪಡೆದ ಅಂಕೆಗಳ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ತಪ್ಪು ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನವಿದೆ. ಪರೀಕ್ಷೆಗಳು ಇಂಗ್ಲಿಷ್/ ಹಿಂದಿ ಭಾಷೆಯಲ್ಲಿರಲಿದೆ.ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಒಬ್ಬ ಅಭ್ಯರ್ಥಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.

    ಶೈಕ್ಷಣಿಕ ಅರ್ಹತೆಗಳೇನು?

    ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯ/ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.

    1.) ಐಟಿ ಆಫೀಸರ್ ಹುದ್ದೆಗೆ(ಸ್ಕೇಲ್-1): ಅರ್ಜಿ ಸಲ್ಲಿಸುವವರು ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಷನ್/ ಇನ್ಫಾ‌ರ್ಮೇಷನ್‌ ಟೆಕ್ನಾಲಜಿ/ ಎಲೆಕ್ಟ್ರಾನಿಕ್ಸ್/ /ಎಲೆಕ್ಟ್ರಾನಿಕ್ಸ್ ಆ್ಯಂಡ್  ಟೆಲಿ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆ್ಯಂಡ್  ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ ಸ್ಟ್ರುಮೆಂಟೇಷನ್‌ನಲ್ಲಿ ನಾಲ್ಕು ವರ್ಷಗಳ ಎಂಜಿನಿಯರಿಂಗ್‌ ಅಥವಾ ಟೆಕ್ನಾಲಜಿ ಪದವಿ ಅಥವಾ ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಷನ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ಸ್ಟುಮೆಂಟೇಶನ್/ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಶನ್ ಟೆಕ್ನಾಲಜಿ/ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

    2.)ಅಗ್ನಿಕಲ್ಟರ್ರ್ ಫೀಲ್ಡ್ ಆಫೀಸರ್: (ಸ್ಕೇಲ್-1):ಕೃಷಿತೋಟಗಾರಿಕೆ / ಪಶುಸಂಗೋಪನೆ,/ ಪಶು ವಿಜ್ಞಾನ/ ಡೇರಿ ಸೈನ್ಸ್/ ಅಗ್ರಿಎಂಜಿನಿಯರಿಂಗ್  ಮೀನುಗಾರಿಕೆ ವಿಜ್ಞಾನ/ ಮೀನು ಸಾಕಣೆ, ಅಗ್ರಿ ಮಾರ್ಕೆಟಿಂಗ್ ಆ್ಯಂಡ್ ಕೋ ಆಪರೇಷನ್ ಕೋ ಆಪರೇಷನ್ ಆ್ಯಂಡ್ ಬ್ಯಾಂಕಿಂಗ್ / ಅಗ್ರೊ ಫಾರೆಸ್ಟ್ರಿಯಲ್ಲಿ ನಾಲ್ಕು ವರ್ಷಗಳ ಪದವಿ ಪಡೆದಿರಬೇಕು.

    3.) ಲಾ ಆಫೀಸರ್ ಹುದ್ದೆಗೆ:(ಸ್ಕೇಲ್-1): ಎಲ್ ಎಲ್ ಬಿ ಪದವಿ ಪಡೆದಿರಬೇಕು ಮತ್ತು ಬಾರ್ ಕೌನ್ಸಿಲ್‌ನ ಸದಸ್ಯತ್ವ ಪಡೆದಿರಬೇಕು.

    4.) ರಾಜ್ಯ ಭಾಷಾ ಅಧಿಕಾರಿ ಹುದ್ದೆಗೆ:(ಸ್ಕೇಲ್-1): ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ – ಪದವಿಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು ಅಥವಾ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಪದವಿಯಲ್ಲಿ ಇಂಗ್ಲಿಷ್ ಮತ್ತು ಹಿಂದಿಯನ್ನು ವಿಷಯವಾಗಿ ಅಭ್ಯಾಸ ಮಾಡಿರಬೇಕು.

    5.) ಎಚ್ ಆರ್ / ಪರ್ಸನಲ್ ಆಫೀಸರ್:(ಸ್ಕೇಲ್-1):

    ಪದವೀಧರರಾಗಿರಬೇಕು ಮತ್ತು ಪರ್ಸನಲ್ ಮ್ಯಾನೇಜ್‌ಮೆಂಟ್/ಇಂಡಸ್ಟ್ರಿಯಲ್ ರಿಲೇಷನ್ಸ್ ಎಚ್‌ಆರ್/ ಎಚ್‌ಆರ್‌ಡಿ/ ಸೋಷಿಯಲ್ ವರ್ಕ್/ ಕಾರ್ಮಿಕ ಕಾನೂನು ಇದ್ಯಾವುದಾದರೂ ವಿಷಯದಲ್ಲಿ ಪೂರ್ಣಾವಧಿಯ ಸ್ನಾತಕೋತ್ತರ ಪದವಿ ಅಥವಾ ಪೂರ್ಣಾವಧಿಯ ಸ್ನಾತಕೋತ್ತರಥವಾ ಡಿಪ್ಲೊಮಾ ಮಾಡಿರಬೇಕು.

    6.) ಮಾರ್ಕೆಟಿಂಗ್ ಆಫೀಸರ್: (ಸ್ಕೇಲ್-1): ಪದವೀಧರರಾಗಿರಬೇಕು ಮತ್ತು ಪೂರ್ಣಾವಧಿ ಎಂಎಂಎಸ್ (ಮಾರ್ಕೆಟಿಂಗ್) ಎಂಬಿಎ (ಮಾರ್ಕೆಟಿಂಗ್)/ಪಿಜಿಡಿಬಿಎ ಮಾಡಿರಬೇಕು.

    ನೇಮಕ ಹೇಗೆ?

    ಪೂರ್ವಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದ್ದು,(ಪ್ರತಿ ಪತ್ರಿಕೆಗೂ  40 ನಿಮಿಷಗಳಂತೆ  ಒಟ್ಟಾರೆ 120 ನಿಮಿಷಗಳು) 125 ಅಂಕಗಳಿಗೆ 150 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದರಲ್ಲಿ ಇಂಗ್ಲೀಷ್ ಲಾಂಗ್ವೇಜ್‌ ಗೆ 50, ಕ್ವಾಂಟಿಟೇಟಿವ್  ಅಪ್ಟಿಟ್ಯೂಡ್ ಗೆ 50 ಹಾಗೂ ರೀಸನಿಂಗ್ ಎಬಿಲಿಟಿಯ 50 ಪ್ರಶ್ನೆಗಳಿರಲಿವೆ.( ಇದು ರಾಜ್‌ಭಾಷಾ ಅಧಿಕಾರಿ ಹಾಗೂ ಲಾ ಆಫೀಸರ್ ಹುದ್ದೆಗಳಿಗೆ  ಹೊರತಾಗಿ.ಇವೆರಡೂ ಹುದ್ದೆಗಳಿಗೆ ಕ್ವಾಂಟಿಟೇಟಿವ್  ಅಪ್ಟಿಟ್ಯೂಡ್ ಪರೀಕ್ಷೆ ಬದಲಾಗಿ General Awareness with Special Reference to Banking Industry 50 ಪ್ರಶ್ನೆಗಳಿರಲಿವೆ.)

    ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.(ಆಯಾ ವರ್ಗಗಳಿಗೆ ಇರುವ ಹುದ್ದೆಗಳ ಸಂಖ್ಯೆಗಿಂತ 10 ಪಟ್ಟು ಹೆಚ್ಚು ಅಭ್ಯರ್ಥಿಗಳನ್ನ ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡುವುದರಿಂದ 1:10 ಅನುಪಾತ)

    ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಮುಖ್ಯ ಪರೀಕ್ಷೆಯು ಬೆಂಗಳೂರು ಹಾಗೂ ಹುಬ್ಬಳ್ಳಿ ಯಲ್ಲಿ ಮಾತ್ರ ನಡೆಯಲಿದ್ದು, ನಿಗದಿತ ದಿನದಂದು ಆನ್ ಲೈನ್‌ನಲ್ಲಿಯೇ ಲಿಖಿತ ಪರೀಕ್ಷೆ ನಡೆಯಲಿವೆ. ಮುಖ್ಯ ಪರೀಕ್ಷೆಯು ವೃತ್ತಿಪರ ಜ್ಞಾನ ಕ್ಕೆ ಸಂಭಂದಿಸಿದ್ದು 45 ನಿಮಿಷಗಳ ಕಾಲ ನಡೆಯಲಿದ್ದು, 60 ಪ್ರಶ್ನೆಗಳನ್ನು  60 ಅಂಕಗಳಿಗೆ ಕೇಳಲಾಗುತ್ತದೆ.(ರಾಜ ಭಾಷಾ ಅಧಿಕಾರಿಗಳ ಹುದ್ದೆಗಳಿಗೆ ಡಿಸ್ಕೃಪ್ಟಿವ್ ಟೆಸ್ಟ್ ಎರಡು ಹಂತಗಳಲ್ಲಿ ನಡೆಯಲಿದ್ದು  ವೃತ್ತಿಪರ ಜ್ಞಾನ ಕ್ಕೆ ಸಂಭಂದಿಸಿದ 45 ಪ್ರಶ್ನೆ ಒಬ್ಜೆಕ್ಟಿವ್ ಮಾದರಿಯಲ್ಲಿದ್ದು,ವ್ತತ್ತಿಪರ ಜ್ಞಾನ ಕ್ಕೆ ಸಂಬಂದಿಸಿದಂತೆ ಇನ್ನೊಂದು ಡಿಸ್ಕ್ರೆಪ್ಟಿವ್ ಪತ್ರಿಕೆಯಲ್ಲಿ ಎರಡು ಪ್ರಶ್ನೆಗಳಿರಲಿದ್ದು ಅವಧಿ ಎರಡೂ ಪರೀಕ್ಷೆಗೆ 30 ನಿಮಿಷಗಳಂತೆ ಒಟ್ಟಾರೆ ಒಂದು ಗಂಟೆಯ ಅವಧಿ ನೀಡಲಾಗಿದ್ದು. ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿಯೇ ಉತ್ತರವನ್ನು ಬರೆಯಬೇಕು.

    ಗಮನಿಸಿ: ಈ ಹಿಂದಿನಂತೆ ಇದ್ದ  ಮುಖ್ಯ ಪರೀಕ್ಷೆಯಲ್ಲಿ ಬದಲಾವಣೆ ಮಾಡಿದ್ದು ಈ ಸಲ ವೃತ್ತಿಪರ ಜ್ಞಾನ ದ ಪರೀಕ್ಷೆ ಬರೆಯಬೇಕು.(ಸ್ಪೇಶಲಿಸ್ಟ್ ಹುದ್ದೆಗಳಾಗಿ ರೋದರಿಂದ)

    ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಇರುತ್ತದೆ. ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯಕ್ಕೆ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕವನ್ನು  ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ.ಕನ್ನಡದಲ್ಲಿ ಪರೀಕ್ಷೆ ಇರುವುದಿಲ್ಲ.

    ಮುಖ್ಯ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತಕ್ಕೆ ಅರ್ಹರಾಗುತ್ತಾರೆ. ಇವುಗಳಿಗೆ ಬೇಕಾಗುವ ಕನಿಷ್ಠ ಅರ್ಹತಾ ಅಂಕಗಳನ್ನು ಬ್ಯಾಂಕ್ ನಿರ್ಧರಿಸುತ್ತದೆ.

    ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಸಂದರ್ಶನ (100 ಅಂಕಗಳು)  ಬ್ಯಾಂಕ್ ನಡೆಸಲಿವೆ. ಸಂದರ್ಶನದ ಸಂದರ್ಭದಲ್ಲಿ ‘ಒಬಿಸಿ’ ವರ್ಗದ  ಅಡಿಯಲ್ಲಿ ಹಂತ-3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು ‘ಕೆನೆರಹಿತ ಪದರ'(‘Non-Creamy layer’) ಷರತ್ತನ್ನು ಒಳಗೊಂಡಿರುವುದನ್ನು ಸಲ್ಲಿಸಬೇಕಾಗುತ್ತದೆ. ಒಬಿಸಿ ಎಂದು ನೋಂದಾಯಿಸಿ ಕೊಂಡಿರುವ ಆದರೆ    (‘Non-Creamy layer’)’ಕೆನೆರಹಿತ ಪದರ’ ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. EWS ವರ್ಗದ ಅಡಿಯಲ್ಲಿ ಹಂತ -3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. EWS ಎಂದು ನೋಂದಾಯಿಸಿಕೊಂಡ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅಂತವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ.

    ಆಯ್ಕೆ ಪಟ್ಟಿ:

    ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ- II ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು.ಮುಖ್ಯ ಪರೀಕ್ಷೆಯಲ್ಲಿ  ಪಡೆದ ಅಂಕಗಳು (ಹಂತ- 2), ವಸ್ತುನಿಷ್ಠ ಪರೀಕ್ಷೆ ಮತ್ತು ವಿವರಣಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಹಾಗೂ ಹಂತ-3 ರಲ್ಲಿ ಪಡೆದ ಅಂಕಗಳಿಗೆ ಸೇರಿಸಲಾಗುತ್ತದೆ. ಅರ್ಹತೆ ಪಟ್ಟಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ (ಹಂತ -1) ಪಡೆದ ಅಂಕಗಳನ್ನು ಪರಿಗಣಿಸುವುದಿಲ್ಲ. ಹಂತ-2 ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು (60 ಅಂಕಗಳನ್ನು 100 ಕ್ಕೆ ಪರಿವರ್ತನೆ ಮಾಡಿ) ಅದರ  80% ಅಂಕಗಳು ಮತ್ತು ಅಭ್ಯರ್ಥಿಗಳ ಹಂತ-3 ರಲ್ಲಿ ಪಡೆದ ಅಂಕಗಳನ್ನು (100 ಅಂಕಗಳಲ್ಲಿ)  ಅದರ 20% ಅಂಕಗಳನ್ನು ಸೇರಿಸಿ(100 ರಲ್ಲಿ) ಪರಿವರ್ತಿತ ಅಂಕಗಳನ್ನು ಒಟ್ಟು ಸೇರಿಸಿ ನಂತರ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುತ್ತದೆ. ಹಂತ- 2 ಮತ್ತು ಹಂತ- 3 ರಲ್ಲಿ ಉನ್ನತ ಶ್ರೇಣಿಯನ್ನು ಪಡೆದ ಪ್ರತಿ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸಲು ವೆಬ್ ಲಿಂಕ್: ಹಾಗೂ ಅಧಿಸೂಚನೆಗೆ:

    https://bit.ly/3frUh70 ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗೆ www.ibps.in

    ಗಮನಿಸಿ:

    ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸಂಪೂರ್ಣವಾಗಿ ಅಧಿಸೂಚನೆಯನ್ನು ಓದಿಕೊಳ್ಳಬೇಕು. ನೇಮಕ ಸಂಬಂಧ ಎಲ್ಲಾ ಮಾಹಿತಿಯನ್ನು IBPS ತನ್ನ ವೆಬ್‌ಸೈಟ್‌ನಲ್ಲೇ ಪ್ರಕಟಿಸುತ್ತದೆ.

    ಆರ್.ಕೆ. ಬಾಲಚಂದ್ರ
    ಆರ್.ಕೆ. ಬಾಲಚಂದ್ರ
    ಕೊಡಗು ಲೀಡ್‌ ನ ಬ್ಯಾಂಕ್‌ ನ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಆರ್‌ ಕೆ ಬಾಲಚಂದ್ರ ಅವರು ಖ್ಯಾತ ತರಬೇತಿದಾರರೂ ಹೌದು. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಳೆದ 35 ವರ್ಷಗಳಿಂದ ಉಚಿತ ತರಬೇತಿ ನೀಡುತ್ತಾ ಬಂದಿರುವ ಅವರು, 30 ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಪಡೆಯಲು ಕಾರಣರಾಗಿದ್ದಾರೆ. ಸರಕಾರಿ ಉದ್ಯೋಗದ ಬಗ್ಗೆ ಮಾಹಿತಿ ನೀಡುವ ʼಗೌರ್ಮೆಂಟ್‌ ಜಾಬ್‌ ಪಡೆಯುವುದು ಹೇಗೆʼ ಎಂಬ ಕೃತಿ ಬರೆದಿದ್ದಾರೆ. ಚಿಕ್ಕಮಗಳೂರಿನ ಕಾರ್ಪೋರೇಷನ್‌ ಬ್ಯಾಂಕ್‌ ಸ್ವ ಉದ್ಯೋಗ ತರಬೇತಿ ಕೇಂದ್ರವನ್ನು ಅತ್ಯುತ್ತಮ ಕೇಂದ್ರವಾಗಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಂದ ಪ್ರಶಸ್ತಿ, ಮೈಸೂರಿನ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಉದ್ಯೋಗಕ್ಕೆ ಸಂಬಂಧಿಸಿದ ಅಂಕಣ ಬರೆಯುತ್ತಿದ್ದಾರೆ.
    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!