23.6 C
Karnataka
Thursday, May 21, 2026
    Home Blog Page 19

    Crop insurance :ದಾಳಿಂಬೆ ಹಾಗೂ ಇತರ ತೋಟಗಾರಿಕಾ ಬೆಳೆಗಳ ಬೆಳೆವಿಮೆ ಮಂಜೂರು

    CHITRADURGA , JUNE 04

    ದಾಳಿಂಬೆ ಸೇರಿದಂತೆ ಇತರ ತೋಟಗಾರಿಕೆ ಬೆಳೆಗಳ ಬೆಳೆವಿಮೆಗೆ ಶೀಘ್ರದಲ್ಲಿ ಮಂಜೂರಾತಿಯನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಅವರು ಇಂದು ಹಿರಿಯೂರು ತಾಲ್ಲೂಕಿನ ಧರ್ಮಪುರ ಕೆರೆ ಮತ್ತು ಇತರೆ 7 ಕೆರೆಗಳಿಗೆ ವೇದಾವತಿ ನದಿಯಿಂದ ಏತ ನೀರಾವರಿ ಮೂಲಕ ನೀರನ್ನು ಕೆರೆಗಳಿಗೆ ತುಂಬಿಸುವ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯವನ್ನು ನೆರವೇರಿಸಿ ಮಾತನಾಡಿದರು.

    ಚಿತ್ರದುರ್ಗ 171 ಹಳ್ಳಿಗಳಿಗೆ, ಹಿರಿಯೂರಿನ 131 ಹಳ್ಳಿಗಳಿಗೆ ಬಹುಗ್ರಾಮ ಕುಡಿಯು ನೀರಿನ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆಯೂ ಮುಗಿದಿರುತ್ತದೆ. ಧರ್ಮಪುರ ಕೆರೆ ಸೇರಿದಂತೆ 7 ಕೆರೆಗಳಿಗೆ ನೀರು ತುಂಬುವ ಕಾಮಗಾರಿಯನ್ನು 40 ಕೋಟಿ ರೂ.ಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಇನ್ನಿತರ ಪೂರಕ ಕೆಲಸಗಳಿಗೆ 50 ಕೋಟಿ ರೂ.ಗಳನ್ನು ಮೀಸಲಿರಿಸಿದ್ದು, ಇದಕ್ಕೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯನ್ನು ಒಂದು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು. ಈ ಭಾಗದ ಜನರ ಆರೋಗ್ಯ ಸೌಕರ್ಯಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಯೋಜನೆ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 1000 ಎಕರೆಯ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣಕ್ಕೆ ಸರ್ಕಾರಿ ಆದೇಶವನ್ನು ನೀಡಲಾಗಿದೆ. ಟೌನ್‍ಶಿಪ್‍ಗಾಗಿ ಈಗಾಗಲೇ ಸ್ಥಳ ನಿಗದಿಪಡಿಸಲಾಗಿದೆ. ಬೆಳಗಾವಿ, ದಾವಣಗೆರೆ, ಚಿತ್ರದುರ್ಗ ಮತ್ತು ಧಾರವಾಡದಲ್ಲಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ ಮಾಡುವ ಉದ್ದೇಶವಿದೆ ಎಂದರು.

    25 ಲಕ್ಷ ಮನೆಗಳಿಗೆ ನಳ ಸಂಪರ್ಕ:
    ಈ ಪ್ರದೇಶದ ಎಲ್ಲ ವರ್ಗದ ಜನರಿಗೆ ಸಮಾನ ಅವಕಾಶಗಳನ್ನು ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ಒದಗಿಸಲಾಗಿದೆ. ಮನೆ ಮನೆ ಗಂಗೆ – ನರೇಂದ್ರ ಮೋದಿಯವರ ದಿಟ್ಟತನದ ಕಾರ್ಯಕ್ರಮವಾಗಿದೆ. ಕರ್ನಾಟಕದಲ್ಲಿ ಕಳೆದ ವರ್ಷ 25 ಲಕ್ಷ ಮನೆಗಳಿಗೆ ನೀರಿನ ಸಂಪರ್ಕವನ್ನು ನೀಡಲಾಗಿದ್ದು, ಈ ವರ್ಷವೂ 25 ಲಕ್ಷ ಮನೆಗಳಿಗೆ ನಳ ಸಂಪರ್ಕವನ್ನು ಒದಗಿಸುವ ಗುರಿಯನ್ನು ತಲುಪಲಾಗುವುದು ಎಂದರು.

    ಭದ್ರಾ ಮೇಲ್ದಂಡೆ ಯೋಜನೆ- ರಾಷ್ಟ್ರೀಯ ಯೋಜನೆಯಾಗಿ ಘೋಷಣೆ:
    ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ ಗಳು ಈ ಭಾಗದ ರೈತರ ಕನಸನ್ನು ನನಸು ಮಾಡುವ ದಿಕ್ಕನಲ್ಲಿ ಪ್ರಾರಂಭವಾಗಿದೆ. 2008 ರಲ್ಲಿ ನಾಯಕರಾದ ಯಡಿಯೂರಪ್ಪನವರ ಈ ಭಾಗದ ನೀರಿನ ಬವಣೆಯನ್ನು ತೀರಿಸಲು ತೀರ್ಮಾನಿಸಿ, ನಾನು ನೀರಾವರಿ ಸಚಿವನಾಗಿದ್ದಾಗ, ಈ ಬೃಹತ್ ಯೋಜನೆಗೆ ಅನುಮತಿ, ಪರಿಸರ ಅನುಮತಿ, ಅರಣ್ಯದ ಅನುಮತಿಯನ್ನು ಪಡೆದು ಯೋಜನೆ ಪ್ರಾರಂಭಿಸಲಾಯಿತು. ಹಿರಿಯೂರಿನ ರೈತರು 543 ದಿನಗಳ ಧರಣಿಯನ್ನು ನಡೆಸಿದ್ದರು. ಇದು ಗಂಭೀರವಾದ ಹೋರಾಟವಾಗಿತ್ತು. ಹೋರಾಟದಲ್ಲಿ ನಿರತರಾಗಿದ್ದ ರೈತರಿಗೆ, 15 ದಿನದೊಳಗೆ ವಾಣಿವಿಲಾಸ ಡ್ಯಾಂಗೆ ನೀರನ್ನು ಹರಿಸುವ ಭರವಸೆ ನೀಡಿ, ಆದೇಶವನ್ನೂ ನೀಡಿದ್ದೆ. ಭದ್ರಾ ಮೇಲ್ದಂಡೆ ಯೋಜನೆ ಕೇಂದ್ರ ಸಚಿವ ಸಂಪುಟದ ಅನುಮೋದನೆ ಪಡೆದು ಶೀಘ್ರದಲ್ಲಿ ರಾಷ್ಟ್ರೀಯ ಯೋಜನೆಯಂದು ಘೋಷಣೆಯಾಗಿ , ಯೋಜನೆಯ ಅನುಷ್ಠಾನಕ್ಕೆ ಕೇಂದ್ರದಿಂದ ಅನುದಾನ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದರು.

    ದುಡಿಯುವ ವರ್ಗಕ್ಕೆ ಶಕ್ತಿ ತುಂಬಲಾಗುತ್ತಿದೆ :
    ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಒತ್ತು ನೀಡುತ್ತಿದೆ. ಒಂದೇ ವರ್ಷದಲ್ಲಿ 7000 ಕೊಠಡಿಗಳನ್ನು ನಿರ್ಮಿಸುವ ತೀರ್ಮಾನಿಸಲಾಗಿದೆ. 100 ಪ್ರಾಥಮಿಕ ಆರೋಗ್ಯಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು ,ಪ್ರತಿ ತಾಲ್ಲೂಕಿನಲ್ಲಿಯೂ ಕಡುಬಡವರಿಗೆ, ಹಿರಿಯರಿಗೆ ಉಚಿತ ಆರೋಗ್ಯ ತಪಾಸಣೆ ವ್ಯವಸ್ಥೆ, ಕಣ್ಣಿನ ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ. ಶ್ರವಣದೋಷವಿರುವ ಕಡುಬಡವರಿಗೆ ಶ್ರವಣ ಸಮಸ್ಯೆ ನಿವಾರಣೆಗೆ ಧ್ವನಿ ಪೆಟ್ಟಿಗೆಯನ್ನು ವಿತರಿಸುವ ಯೋಜನೆಗೆ 500 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಡಯಾಲಿಸಿಸ್‍ನ್ನು 30 ಸಾವಿರ ಸೈಕಲ್‍ನಿಂದ 60 ಸಾವಿರ ಸೈಕಲ್‍ಗೆ ಏರಿಸಲಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ 10 ಕೇಂದ್ರಗಳಲ್ಲಿ ಕಿಮೋಥೆರಪಿ ನೀಡಲಾಗುತ್ತಿದೆ. ಹೀಗೆ, ಶಿಕ್ಷಣ, ಉದ್ಯೋಗ ಪ್ರಾಶಸ್ತ್ಯ ನೀಡಿ ಎಸ್ ಸಿ ಎಸ್‍ಟಿ, ಹಿಂದುಳಿದ ವರ್ಗಗಳ ಅಭ್ಯುದಯ, ಸ್ತ್ರೀಶಕ್ತಿ ಸಂಘಗಳಿಗೆ 1.5 ಲಕ್ಷ ಸಾಲಸೌಲಭ್ಯ ನೀಡಿ, ಅವರು ಉತ್ಪಾದಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯವನ್ನು ಒದಗಿಸಲಾಗುವುದು. ದುಡಿಯುವ ವರ್ಗಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ರೈತವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದು, 8 ಲಕ್ಷ ವಿದ್ಯಾರ್ಥಿಗಳಿಗೆ ಯೋಜನೆಯನ್ನು ತಲುಪಿಸಲಾಗಿದೆ. ಎಸ್ ಸಿ ಎಸ್ ಟಿ ಜನಾಂಗದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದರು

    ಪಠ್ಯಪುಸ್ತಕ ಪರಿಷ್ಕರಣೆ- ವರದಿ ಪರಿಶೀಲನೆಯ ನಂತರ ಶೀಘ್ರದಲ್ಲಿ ತೀರ್ಮಾನ -ಸಿಎಂ

    UDUPI JUNE 1

    ಪಠ್ಯಪುಸ್ತಕ ಪರಿಷ್ಕರಣೆಯ ವರದಿ ಪರಿಶೀಲನೆಯ ನಂತರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

    ಇಂದು ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಅಂಗವಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

    ಪಠ್ಯಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿದಂತೆ, ಈಗಾಗಲೇ ಪಠ್ಯದಲ್ಲಿರುವ ಪಾಠಗಳನ್ನು ತೆಗೆಯುವಂತೆ ಕೆಲ ಸಾಹಿತಿಗಳು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಸಮಗ್ರ ವರದಿಯನ್ನು ಕೇಳಲಾಗಿದೆ. ಸ್ವಾಮೀಜಿಗಳು ಹಾಗೂ ಇತರರ ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು. ಈ ಎಲ್ಲ ವಿಚಾರಗಳ ಬಗ್ಗೆ ಸಮಗ್ರ ವರದಿ ಹಾಗೂ ವಾಸ್ತವಾಂಶವನ್ನು ತಿಳಿಸುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ವರದಿ ಪಡೆದು, ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ನಾಳೆ ವರದಿ ದೊರೆಯಲಿದ್ದು, ಪಠ್ಯಗಳನ್ನು ವಾಪಸ್ಸು ಪಡೆಯುತ್ತೇವೆ ಎನ್ನುವ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

    ಎಸಿಬಿ ಈಗಾಗಲೇ ಬಲವರ್ಧನೆಯಾಗಿದೆ. ಲೋಕಾಯುಕ್ತ ಇದ್ದರೂ , ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಎಸಿಬಿ ಆ ಅಧಿಕಾರವಿದೆ ಎಂದರು.

    ಲವ್ ಜಿಹಾದ್ ಕರಾವಳಿ ಭಾಗದಲ್ಲಿ ಮತ್ತೊಮ್ಮೆ ಸದ್ದುಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಇದಕ್ಕಾಗಿ ಕಾನೂನು ರೂಪಿಸಲಾಗಿದ್ದು, ಯಾರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದರು.

    ಹೆಬ್ರಿ ನೂತನ ಆಡಳಿತ ಸೌಧ ಲೋಕಾರ್ಪಣೆ
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು. ಹೆಬ್ರಿ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

    ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್ , ಗೋವಿಂದ ಕಾರಜೋಳ , ಸುನಿಲ್ ಕುಮಾರ್ , ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಸುಕುಮಾರ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ, ರಾಜ್ಯ ಗೇರು ಬೀಜ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಇತರರು ಉಪಸ್ಥಿತರಿದ್ದರು.

    ಮೂರನೇ ವರ್ಷಕ್ಕೆ ಕನ್ನಡಪ್ರೆಸ್.ಕಾಮ್

    ಪ್ರಿಯ ಓದುಗರೇ,

    ಎರಡು ವರ್ಷದ ಹಿಂದೆ ಇದೇ ದಿನ. ಆಗಷ್ಟೇ ಲಾಕ್ ಡೌನ್ ತೆರವಾಗಿ ಚಟುವಟಿಕೆಗಳು ಶುರುವಾಗುತ್ತಿದ್ದ ಸಮಯ. ವರ್ಕ್ ಫ್ರಮ್ ಹೋಮ್ ಗಳು, ಆನ್ ಲೈನ್ ತರಗತಿಗಳು , ಪರೀಕ್ಷೆ ನಡೆಯುವುದೋ ಇಲ್ಲವೋ ಗೊಂದಲ. ಆದರೆ ಸ್ವಲ್ಪ ದಿನದಲ್ಲೇ ಪರಿಸ್ಥಿತಿ ಮೊದಲಿನಂತೆ ಆಗುವ ಆಶಾ ಭಾವನೆಯಂತೂ ಇತ್ತು.

    ಇಂಥ ಸಂದರ್ಭದಲ್ಲೇ ವರ್ಷದ ಹಿಂದೆ -ಮೇ 29,2020- ನಾನು ಕನ್ನಡಪ್ರೆಸ್.ಕಾಮ್ ಅನ್ನು ಶುರುಮಾಡಿದ್ದು. ಹಿರಿಯ ನಿರ್ದೇಶಕ ಯೋಗರಾಜ ಭಟ್ಟರು ಲೋಕಾರ್ಪಣೆಗೊಳಿಸಿದ್ದರು. ಆ ದಿನ ಬರೆದ ಸಂಪಾದಕೀಯದಲ್ಲಿ ಬರೆದಿದ್ದ ಕೆಲ ಸಾಲು ಹೀಗಿತ್ತು….ಶುದ್ಧ ಪತ್ರಿಕೋದ್ಯಮದ ಆಶಯದೊಂದಿಗೆ ಕನ್ನಡಪ್ರೆಸ್.ಕಾಮ್ ಆರಂಭವಾಗುತ್ತಿದೆ. ನಿಮ್ಮ ಬೆಂಬಲ ಸದಾ ಇರಲಿ. ಕೋವಿಡ್ ಕಾರ್ಮೋಡ ಬೇಗ ಸರಿಯಲಿ . ಎಲ್ಲೆಡೆ ಮತ್ತೆ ಸಂತಸ ಮೂಡಲಿ ಎಂಬ ಆಶಯ ದೊಂದಿಗೆ ಕನ್ನಡಪ್ರೆಸ್ . ಕಾಮ್ ಅನ್ನು ನಿಮ್ಮ ಮಡಿಲಿಗೆ  ಹಾಕುತ್ತಿದ್ದೇವೆ. ಒಪ್ಪಿಸಿಕೊಳ್ಳಿ. ಕಳೆದ ವರ್ಷವೂ ಇದೇ ಸ್ಥಿತಿ . ಆದರೆ ನಾವು ಎರಡನೇ ವರ್ಷ ಮುಗಿಸುವಷ್ಟರಲ್ಲಿ ಕೊರೋನಾ ಮಹಾಮಾರಿ ಒಂದು ಹಂತದ ತಹಬಂದಿಗೆ ಬಂದಿದೆ. ಇದೇ ಸಂತಸದ ವಿಷಯ.

    ಕಳೆದ ವರ್ಷ ಕನ್ನಡಪ್ರೆಸ್.ಕಾಮ್ ನ ಸಹೋದರ ಪೋರ್ಟಲ್ english.kannadapress.com ಕೂಡ ಆರಂಭವಾಗಿ ಜನ ಮನ್ನಣೆ ಗಳಿಸಿತು. ಅದರ ಜೊತೆಗೆ ನಮ್ಮ ಯು ಟ್ಯೂಬ್ ಚಾನಲ್ ಕನ್ನಡಪ್ರೆಸ್ ಕೂಡ ಸಕ್ರಿಯವಾಯಿತು. ಈಗ ಆ ಚಾನಲ್ ನಲ್ಲಿ ಈಗ ನೂರಕ್ಕೂ ಹೆಚ್ಚು ವಿಡಿಯೋಗಳಿವೆ. ಈ ಚಾನಲ್ ಗೂ SUBSCRIBE ಆಗುವ ಮೂಲಕ ನಮ್ಮನ್ನು ಪ್ರೋತ್ಸಾಹಿಸಲು ವಿನಂತಿ.

    ನಿಮ್ಮ ಪ್ರೀತಿ ವಿಶ್ವಾಸ ಹೀಗೆ ಮುಂದುವರಿಯಲಿ. ನಮ್ಮ ಯಾತ್ರೆಯೆ ಮೂರನೇ ವರ್ಷದ ಮೊದಲ ದಿನವಾದ ಇಂದು ಶುದ್ಧ ಪತ್ರಿಕೋದ್ಯಮಕ್ಕೆ ನಮ್ಮನ್ನು ಪುನಃ ಸಮರ್ಪಿಸಿಕೊಳ್ಳುತ್ತಿದ್ದೇವೆ. ನಿಮ್ಮ ಪ್ರತಿಕ್ರಿಯೆಗಳಿಗೆ ಎಂದಿನಂತೆ ಸದಾ ಸ್ವಾಗತ.

    ಶ್ರೀವತ್ಸ ನಾಡಿಗ್,ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ

    ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    BENGALURY MAY 27 :

    ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬಂದಿವೆ. ಅಂದಾಜು 65ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ. ಇದು ಕೈಗಾರಿಕೆ ಸ್ಥಾಪನೆಗೆ ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.‌

    ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಪೂರಕ ಪರಿಸರ, ನೀತಿ ನಿಯಮಗಳು, ತಂತ್ರಜ್ಞಾನ ಆಧಾರ, ಕೌಶಲ್ಯಯುತ ಮಾನವಸಂಪನ್ಮೂಲ, ಆರ್ ಎಂಡ್ ಡಿ ಕೇಂದ್ರಗಳು, ಉದ್ದಿಮೆಗಳಿಗೆ ನೀಡಲಾಗುವ ಪ್ರೋತ್ಸಾಹಕಗಳು, ಭೂಮಿಯ ಲಭ್ಯತೆಗಳಿಂದಾಗಿ ಬಂಡವಾಳ ಹೂಡಿಕೆ ಸಂಸ್ಥೆಗಳಿಗೆ ಕರ್ನಾಟಕದ ರಾಜ್ಯದ ಮೇಲೆ ವಿಶ್ವಾಸವನ್ನು ಮೂಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ -2022ಕ್ಕೆ ಸಂಬಂಧಿಸಿದಂತೆ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದರು.

    ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಹಲವು ಜಾಗತಿಕ ಉದ್ದಿಮೆದಾರರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಕರ್ನಾಟಕ ಬಂಡವಾಳ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದೆ. ಕರ್ನಾಟಕದಲ್ಲಿ ಒಟ್ಟು 65 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ವಿಶ್ವ ಪ್ರಮುಖ ಸಂಸ್ಥೆಗಳು ಬದ್ಧತೆ ತೋರಿದ್ದು, ಸುಮಾರು 25 ಕಂಪನಿಗಳೊಂದಿಗೆ ಚರ್ಚಿಸಲಾಗಿದೆ. ಭಾರತ ದೇಶವನ್ನು ಹೊಸ ಆರ್ಥಿಕ ಶಕ್ತಿಯಾಗಿ ವಿಶ್ವ ಎದುರುನೋಡುತ್ತಿದೆ. ಕರ್ನಾಟಕ ರಾಜ್ಯದ ಎಲ್ಲ ರಂಗಗಳಲ್ಲಿ ಹೂಡಿಕೆದಾರರು ಆಸಕ್ತಿ ತೋರಿದರು. ಬಂಡವಾಳ ಹೂಡಿಕೆಯ ಜೊತೆಗೆ ವಿಸ್ತರಣಾ ಕಾರ್ಯಕ್ಕೂ ಉತ್ಸುಕತೆ ತೋರಿದರು. ಹೈಡ್ರೋ ಪವರ್, ಏರೋಸ್ಪೇಸ್, ನವೀಕರಿಸಬಹುದಾದ ಇಂಧನ ಸೇರಿದಂತೆ ಪ್ರಮುಖ ಕ್ಷೇತ್ರದ ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆಗಳು ಬಂಡವಾಳ ಹೂಡಿಕೆಯಲ್ಲಿ ಆಸಕ್ತಿ ತೋರಿದರು. ಹವಾಮಾನ ಬದಲಾವಣೆ, ನವೀಕರಿಸಬಹುದಾದ ಇಂಧನಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು ಎಂದರು.

    ಕೋವಿಡ್ ನಂತರದ ದೇಶದ ಆರ್ಥಿಕತೆಯ ಬಲವರ್ಧನೆಯಲ್ಲಿ ಕರ್ನಾಟಕದ ಪಾತ್ರ ವಹಿಸಿದೆ ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿರುವ ಸಂಸ್ಥೆಗಳ ಉದ್ದಿಮೆಗಳ ಸ್ಥಾಪನೆಗೆ ಅನುಕೂಲವಾಗುವಂತೆ ಮೂಲಭೂತಸೌಕರ್ಯ, ಉದ್ದಿಮೆ ಸ್ಥಾಪನೆಗೆ ಸರಳೀಕೃತ ಪ್ರಕ್ರಿಯೆಗಳು, ಈಸ್ ಆಫ್ ಡೂಯಿಂಗ್ ಬಿಸನೆಸ್ ನೀತಿಯ ಮೂಲಕ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಎಂದರು.

    ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು 50 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. 30 ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದರು.

    ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು,4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. 10 ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದರು.

    ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಎನರ್ಜಿ, ಸೀಮೆನ್ಸ್ , ಅಬ್ ಇನ್ಬೇವ್, ದಸ್ಸಾಲ್ಟ್ ಸಿಸ್ಟಂ , ನಸ್ಟ್ಲೆ , ಆರ್ಸೆಲಾರ್ ಮಿತ್ತಲ್ ಸಂಸ್ಥೆ ಭಾರ್ತಿ ಎಂಟರ್ ಪ್ರೈಸಸ್, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡುವ ಭರವಸೆ ನೀಡಿವೆ ಎಂದರು.

    ಇದಲ್ಲದೆ ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸ್ ನ್ ಕಂಟ್ರೋಲ್ಸ್, ಹನಿವೆಲ್, ಐಬಿಎಂ, ಐಕಿಯ ಸ್ಟೋರ್ಸ್, ಪೇಪಾಲ್, ಆಕ್ಸಿಸ್ ಬ್ಯಾಂಕ್ ಸಂಸ್ಥೆಗಳು ರಾಜ್ಯದ ವಿವಿಧ ವಲಯಗಳಲ್ಲಿ ಹೂಡಿಕೆ ಅವಕಾಶ ಬಗ್ಗೆ ಆಸಕ್ತಿ ತೋರಿರುವುದಾಗಿ ತಿಳಿಸಿದರು.

    ಕರ್ನಾಟಕ ಸರ್ಕಾರ ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಹಮ್ಮಿಕೊಂಡಿರುವ ಯೋಜನೆಯಂತೆ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲಸೌಲಭ್ಯ ನೀಡಲು ಆಕ್ಸಿಸ್ ಬ್ಯಾಂಕ್ ಸಂಸ್ಥೆಗೆ ಆ್ಯಂಕರ್ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುವಂತೆ ಕೋರಲಾಗಿದೆ ಎಂದು ತಿಳಿಸಿದರು.

    ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮಿಟ್ ನಲ್ಲಿ ಭಾಗವಹಿಸಲು ವಿಶ್ವದ ಎಲ್ಲ ಪ್ರಮುಖ ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿದೆ ಎಂದರು.

    ನವೆಂಬರ್ ಮಾಹೆಯೊಳಗೆ ನಗರದ ಮೂಲಸೌಲಭ್ಯವನ್ನು ಸರಿಪಡಿಸಲಾಗುವುದು. ಇದಕ್ಕಾಗಿ ಕಾರ್ಯಪಡೆಯನ್ನು ರಚಿಸಲಾಗಿದೆ. ನಗರೋತ್ಥಾನ ಯೋಜನೆಯಡಿಯಲ್ಲಿ 6 ಸಾವಿರ ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು, ಮುಂದಿನ 18 ತಿಂಗಳಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು ಎಂದರು.

    ವಂದಿತಾ ಶರ್ಮಾ ನೂತನ ಮುಖ್ಯ ಕಾರ್ಯದರ್ಶಿ

    BENGALURU MAY 27

    ರಾಜ್ಯದ ಮುಖ್ಯಕಾರ್ಯದರ್ಶಿ ಪಿ ರವಿಕುಮಾರ್ ಅವರು ಮೇ 31ರಂದು ಸೇವಾ ನಿವೃತ್ತಿ ಹೊಂದುತ್ತಿರುವುದರಿಂದ ಅವರ ಸ್ಥಳಕ್ಕೆ ನೂತನ ಮುಖ್ಯಕಾರ್ಯದರ್ಶಿಯಾಗಿ 1986 ನೇ ಬ್ಯಾಚಿನ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

    ಪ್ರಸಕ್ತ ವಂದನಾ ಶರ್ಮಾ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಥೆರೆಸಾ ಭಟ್ಟಾಚಾರ್ಯ,ಮಾಲತಿ ದಾಸ್ ಮತ್ತು ರತ್ನಾಪ್ರಭಾ ಅವರ ನಂತರ ಈ ಸ್ಥಾನವನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆ ಎಂಬ ಕೀರ್ತಿಗೆ ವಂದಿತಾ ಶರ್ಮಾ ಪಾತ್ರರಾಗಿದ್ದಾರೆ.

    ಬಿಜೆಪಿಗೆ ಪರ್ಯಾಯ ರಾಜಕೀಯ ಶಕ್ತಿ; ವಿಜಯದಶಮಿಗೆ ನಿರ್ಧಾರ ಎಂದ ಕೆಸಿಎಆರ್-ಎಚ್‌ಡಿಕೆ

    ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಮಹತ್ವದ ಮಾತುಕತೆ

    BENGALURU MAY 26
    ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರು ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.

    ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ ಕೆಸಿಆರ್ ಅವರು, ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

    ಕರ್ನಾಟಕದ ರಾಜಕೀಯವೂ ರಾಷ್ಟ್ರ ರಾಜಕಾರಣದ ಬಗ್ಗೆ ಸಮಗ್ರವಾಗಿ ಕೆಸಿಆರ್‌ ಅವರು ದಳಪತಿಗಳ ಜತೆ ಮಾತುಕತೆ ನಡೆಸಿದರು.ಸುದೀರ್ಘ ಸಭೆಯ ನಂತರ ಕೆ.ಚಂದ್ರಶೇಖರ ರಾವ್‌ ಮತ್ತು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

    ಉಜ್ವಲ್ ಹಿಂದೂಸ್ತಾನ್ ಬೇಕಿದೆ:

    ಉಜ್ವಲ್ ಹಿಂದೂಸ್ತಾನ್ ನಮಗೆ ಬೇಕಿದೆ. ಜನರು ಈ ನಿಟ್ಟಿನಲ್ಲಿ ಗಮನಹರಿಸಬೇಕಿದೆ ಎಂದು ಕೆ.ಚಂದ್ರಶೇಖರರಾವ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

    ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವಶಕ್ತಿ ಇದ್ದರೂ, ದೇಶದಲ್ಲಿ ಹಲವು‌ ಸಂಪನ್ಮೂಲಗಳಿದ್ದರೂ ಇವತ್ತಿಗೂ ಹಲವು‌ ಸಮಸ್ಯೆಗಳ ಬಗ್ಗೆ ಚರ್ಚೆ, ಪರಿಹಾರ ಇಲ್ಲ. ದೇಶದಲ್ಲಿ ರೈತರು, ದಲಿತರು, ಆದಿವಾಸಿಗಳು ಕಷ್ಟದಲ್ಲಿ ಇದ್ದಾರೆ. ಭರವಸೆಗಳನ್ನು ಸಾಕಷ್ಟು ಕೊಡಬಹುದು. ಆದರೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ. ಯುವಕರಿಗೆ ಉದ್ಯೋಗ ಕೊಟ್ರಾ? ದೇಶದಲ್ಲಿ ಎಲ್ಲವೂ ಸಮಸ್ಯೆಗಳೇ ಎಂದು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

    ದೇಶದಲ್ಲಿ ಅತೀ ಶೀಘ್ರದಲ್ಲೇ ಬದಲಾವಣೆಯಾಗಲಿದೆ ಹಾಗೂ ದೇಶವೂ ಬದಲಾಗಲಿದೆ. ಎರಡು-ಮೂರು ತಿಂಗಳು ಕಾಯಿರಿ ಎಂದು ಕೆಸಿಆರ್‌ ಅವರು ಸೂಚ್ಯವಾಗಿ ಹೇಳಿದರು.

    ಕರ್ನಾಟಕದ ರಾಜಕೀಯ ಕೂಡ ನನಗೆ ಗೊತ್ತಿದೆ. ಕರ್ನಾಟಕದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದೆ. ಎಚ್.ಡಿ.ಕುಮಾರಸ್ಚಾಮಿ ಅವರು ಮುಖ್ಯಮಂತ್ರಿ ಆಗಿದ್ದವರು. ಭಾರತ ಬದಲಿಸುವ ಕೆಲಸ ನಮ್ಮಿಂದ ಆಗಲಿದೆ. ಆ ನಿಟ್ಟಿನಲ್ಲಿ ನಾವು ಪ್ರಯತ್ನ ನಡೆಸುತ್ತಿದ್ದೇವೆ ಎಂದರು ಅವರು.

    ದೇಶದ ಸರ್ಕಾರ, ಸಮಸ್ಯೆಗಳ ಬಗ್ಗೆ ದೇವೇಗೌಡರ ಜತೆ ಸುದೀರ್ಘ ಚರ್ಚೆ ಮಾಡಿದ್ದೇನೆ. ದೇಶದಲ್ಲಿ ಬದಲಾವಣೆ ತರಬೇಕಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಹೇಳಿದರು.

    ಪರ್ಯಾಯ ಶಕ್ತಿ ಅನಿವಾರ್ಯ: ಎಚ್‌ಡಿಕೆ

    ದೇಶಕ್ಕೆ ಪರ್ಯಾಯ ರಾಜಕೀಯ ವ್ಯವಸ್ಥೆ ಅನಿವಾರ್ಯವಾಗಿದೆ. ಮೂರನೇ ಶಕ್ತಿ ಇಂದು ಅತ್ಯಗತ್ಯವಾಗಿದ್ದು, ಎರಡ್ಮೂರು ತಿಂಗಳಲ್ಲಿ ಸ್ಪಷ್ಟತೆ ಸಿಗಲಿದೆ. ಒಂದು ಉತ್ತಮ ನಿರ್ಧಾರ ಹೊರಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿವೆ. ಈ ಪಕ್ಷಗಳ ಮುಖಂಡರ ಜತೆ ತೆಲಂಗಾಣ ಸಿಎಂ ಚಂದ್ರಶೇಖರರಾವ್ ಅವರು ಚರ್ಚೆ ಮಾಡುತ್ತಿದ್ದಾರೆ. ಹಿಂದಿನ ಪ್ರಯತ್ನಕ್ಕಿಂತ ಹೊಸ ರೀತಿ ಪ್ರಯತ್ನ ಮಾಡ್ತಿದ್ದಾರೆ. ದೇಶದ ಸಂಪತ್ತು ಕಡುಬಡವರಿಗೆ ತಲುಪಬೇಕು. ಸಂಪತ್ತು ದೇಶದ ಬೆಳವಣಿಗೆಗೆ ಸಹಕಾರವಾಗಬೇಕು. ಆ ನಿಟ್ಟಿನಲ್ಲಿ ಚಂದ್ರಶೇಖರ್ ರಾವ್ ಅವರು ಚರ್ಚಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

    ದಸರಾ ವೇಳೆ ಉತ್ತಮ ನಿರ್ಧಾರ:

    ದಸರಾ ಅಂದರೆ ಯುದ್ಧಕ್ಕೆ‌ ಹೋಗುವ ಸಂದರ್ಭ. ಹಾಗಾಗಿ ದಸರಾ ವೇಳೆ ಉತ್ತಮ ನಿರ್ಧಾರ ಹೊರಬೀಳಲಿದೆ ಎಂದು ಇದೇ ವೇಳೆ ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

    ಮೂರನೇ ಶಕ್ತಿ ಇಂದು ಅನಿವಾರ್ಯವಾಗಿದೆ. ಆಗ ತೆಗೆದುಕೊಂಡ ನಿರ್ಣಯ ಬೇರೆ, ಈಗ ತೆಗೆದುಕೊಳ್ಳುವ ನಿರ್ಣಯ ಬೇರೆ. ದೇಶದ ಇತಿಹಾಸಕ್ಕೆ ಇದು ಫೌಂಡೇಷನ್ ಹಾಕಲಿದೆ ಎಂದರು.

    ದೇಶ ಹಲವು ಸಮಸ್ಯೆ ಎದುರಿಸುತ್ತಿದೆ. ಜನರ ಸಮಸ್ಯೆ ಮುಂದಿಟ್ಟುಕೊಂಡೇ ಹೋಗುತ್ತೇವೆ. ಎಲ್ಲರೂ ಸೇರಿಯೇ ಇದಕ್ಕೆ ಶಕ್ತಿ ಕೊಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

    JDS :ಜೆಡಿಎಸ್ ಜನತಾ ಜಲಧಾರೆ ಬ್ರಹ್ಮ ಕಳಸಕ್ಕೆ ಪವಿತ್ರ ಜಲ ತುಂಬಿಸಿದ ಎಚ್.ಡಿ.ಕೆ

    BENGALURU MAY 26

    ಜನತಾ ಜಲಧಾರೆ ಗಂಗಾ ರಥಯಾತ್ರೆ ಅಂಗವಾಗಿ ರಾಜ್ಯದ ಎಲ್ಲ ಜೀವನದಿ ಹಾಗೂ ಉಪ ನದಿಗಳಿಂದ ಸಂಗ್ರಹ ಮಾಡಿದ ಪವಿತ್ರ ಗಂಗಾ ಜಲದ ಕಳಸ ಪ್ರತಿಷ್ಠಾಪನೆಯ ಮಹಾಪೂಜೆ ಹಾಗೂ ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮ ಇಂದು ಶಾಸ್ತ್ರೋಕ್ತವಾಗಿ ನಡೆಯಿತು.

    ಜೆಡಿಎಸ್‍ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇರಿಸಿರುವ ಬೃಹತ್ ಬ್ರಹ್ಮ ಕಳಸಕ್ಕೆ ಪಂಡಿತ ಡಾ.ಭಾನುಪ್ರಕಾಶ್ ಶರ್ಮ ನೇತೃತ್ವದ ಪಂಡಿತರ ತಂಡದಿಂದ ಪೂಜಾ ಕೈಂಕರ್ಯ ಜರುಗಿತು.

    10 ಅಡಿಯ ಎತ್ತರದ 500 ಲೀಟರ್ ಜಲ ತುಂಬಲಿರುವ ಕಳಸವನ್ನು ಪ್ರತಿಷ್ಠಾಪನೆ ಮಾಡಲಾಯಿತು.ಬೆಳಗ್ಗೆ 9 ಗಂಟೆಯಿಂದಲೇ ಗಣ ಹೋಮ, ನವಗ್ರಹ ಹೋಮ, ಗಂಗಾ ಪೂಜೆ, ಪರ್ಜನ್ಯ ಹೋಮ, ಪೂರ್ಣಾಹುತಿ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಸಾಂಗೋಪಾಂಗವಾಗಿ ನೆರವೇರಿದವು. ಪೂಜೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಾಲ್ಗೊಂಡಿದ್ದರು.

    ದೇಶದ ಏಳು ಮಹಾನದಿಗಳ ಹೆಸರಿನಲ್ಲಿ ಇಡಲಾಗಿದ್ದ ಹದಿನೈದು ಪುಟ್ಟ ಕಳಸಗಳಿಗೆ ಕುಮಾರಸ್ವಾಮಿ ಅವರು ಶಾಸ್ತ್ರಬದ್ಧವಾಗಿ ಪೂಜೆ, ವಿಧಿ ವಿಧಾನ ನೆರವೇರಿಸಿದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಪೂಜಾ ಕೈಂಕರ್ಯ ಬೆಳಗ್ಗೆ 12 ಗಂಟೆಗೆ ಸಮಾಪ್ತಿಯಾಯಿತು.

    ಇದಾದ ಮೇಲೆ ಬ್ರಹ್ಮ ಕಳಸ ಪ್ರತಿಷ್ಠಾಪನೆ ನಡೆಯಿತಲ್ಲದೆ, ರಾಜ್ಯದ ಉದ್ದಗಲಕ್ಕೂ ಸಂಗ್ರಹ ಮಾಡಲಾಗಿದ್ದ ಜಲವನ್ನು ಅದಕ್ಕೆ ತುಂಬಿಸಲಾಯಿತು. ಮೊದಲು ಕುಮಾರಸ್ವಾಮಿ ಅವರು ಪುಟ್ಟ ಕಳಸದ ಮೂಲಕ ಬ್ರಹ್ಮ ಕಳಸಕ್ಕೆ ಪವಿತ್ರ ಜಲವನ್ನು ತುಂಬಿಸಿದರು.

    ಪಕ್ಷದ ‌ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಇಂದಿನಿಂದ ಕಳಸಕ್ಕೆ ಮುಂದಿನ ಒಂದು ವರ್ಷ ಕಾಲ ಸಂಪ್ರದಾಯದಂತೆ ನಿತ್ಯ ಗಂಗಾಪೂಜೆ ನಡೆಯುತ್ತದೆ.

    ನೀರಾವರಿ ಯೋಜನೆ ಜಾರಿಗೆ ಸಂಕಲ್ಪ:

    ಜನತಾ ಜಲಧಾರೆ ಹಾಗೂ ಬ್ರಹ್ಮ ಕಳಸ ಪ್ರತಿಷ್ಠಾಪನೆ ವೇಳೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಹಾಗೂ ಎಲ್ಲ ಜಿಲ್ಲೆಗಳಿಗೂ ಸಮಗ್ರ ನೀರಾವರಿ ಕಲಿಸುವ ಸಂಕಲ್ಪ ಮಾಡಲಾಯಿತು. ಅದಕ್ಕೆ ಶಕ್ತಿ ಕೊಡು ತಾಯಿ ಎಂದು ಗಂಗಾ ಮಾತೆಯನ್ನು ಪ್ರಾರ್ಥನೆ ಮಾಡಿಕೊಂದಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

    ಐದು ವರ್ಷಗಳ ಪೂರ್ಣ ಪ್ರಮಾಣದ ಸ್ವತಂತ್ರ ಸರಕಾರ ನೀಡಿದರೆ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ಈ ಬಗ್ಗೆ ರಾಜಿ ಇಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

    ಇದರ ಜತೆಗೆ, ಸರ್ವ ಜನರ ಹಿತಕ್ಕಾಗಿ ರೂಪಿಸಲಾಗಿರುವ ಪಂಚರತ್ನ ಕಾರ್ಯಕ್ರಮಗಳ ಜಾರಿಗೂ ಶಕ್ತಿ ಕೊಡು ತಾಯಿ ಎಂದು ಗಂಗಾ ಮಾತೆಯವರಲ್ಲಿ ಬೇಡಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

    ವಿಶೇಷ ಮಂಟಪ ಹಾಗೂ ಬ್ರಹ್ಮ ಕಳಸ:

    ಕಳಸ ಪ್ರತಿಷ್ಠಾಪನೆ ಮಾಡಿರುವ ಮಂಟಪವನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ. ಕರ್ನಾಟಕದ ಪರಂಪರೆಯನ್ನು ಬಿಂಬಿಸುವ ವಾಸ್ತುಶಿಲ್ಪ ಉಳ್ಳ ಮಂಟಪ ವಿಶೇಷ ಆಕರ್ಷಣೆಯಾಗಿದೆ. ಇಡೀ ಮಂಟಪವನ್ನು ಆವರಣ ಮಂಟಪ ಕಲಾ ಆರ್ಟ್ ನ ಕಲಾವಿದರು ಸಿದ್ಧಪಡಿಸಿದ್ದಾರೆ. ಈ ಮಂಟಪದಲ್ಲಿ ನಿರಂತರವಾಗಿ ಜಪ, ಮಂತ್ರ, ಮಂಗಳ ನಾದ ಮೊಳಗುತ್ತಿರುತ್ತದೆ.

    ನೀರು ಶುದ್ಧೀಕರಣಕ್ಕೆ ವಿಶೇಷ ವ್ಯವಸ್ಥೆ:

    ಪವಿತ್ರ ಗಂಗಾಜಲವು ಸುಮಾರು ಒಂದು ವರ್ಷ ಕಾಲ ಈ ಕಳಸದಲ್ಲಿ ಇರಲಿದೆ. ನೀರು ಕೆಡದಂತೆ ನೋಡಿಕೊಳ್ಳಲು ವಿಶೇಷ ಯುವಿ – ಓಜೋನೈಶನ್ ವ್ಯವಸ್ಥೆ ಮಾಡಲಾಗಿದೆ. ಇದು ಆಮ್ಲಜನಕಯುಕ್ತ ಆಗಿರುತ್ತದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

    Davos-ದಾವೋಸ್ ನಲ್ಲಿ ಹೂಡಿಕೆ ಆಕರ್ಷಣೆಗೆ ರಾಜ್ಯ ಸರ್ಕಾರದ ಪ್ರಯತ್ನ;ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ

    DAVOS MAY 26
    ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜತೆ ಒಟ್ಟು ೫೨ ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.

    ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಇನ್ನೂ ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ. ಮುಂದಿನ‌ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರ ಆಸಕ್ತಿಯಿಂದ ಸರ್ಕಾರ ಬೃಹತ್ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಿದೆ.

    ಕರ್ನಾಟಕಕ್ಕೆ ದಾವೋಸ್ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದೆ.
    ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ.

    ಮೆ. ಲುಲು ಗ್ರೂಪ್ ಇಂಟರ್ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.

    ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹಕಗಳನ್ನು ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಇದೇ ಸಂದರ್ಭದಲ್ಲಿ ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಆಹ್ವಾನ ನೀಡಲಾಯಿತು.

    ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವ ಸಂಸ್ಥೆಯ ವಿವರಗಳು :

    ಮೆ. ಲುಲು ಗ್ರೂಪ್ ಇಂಟರ್ನ್ಯಾಷನಲ್ :
    ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದೆ. 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

    ರೆನ್ಯೂ ಪವರ್ ಪ್ರೈ.ಲಿ. :
    ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು 2 ಹಂತಗಳಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

    ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ.

    ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.
    ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ ಸಂಸ್ಥೆಗಳ ವಿವರ :
    ಸೀಮೆನ್ಸ್ ಸಂಸ್ಥೆ :
    ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.
    ದಸ್ಸಾಲ್ಸ್ ಸಿಸ್ಟಮ್ಸ್:
    ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ , ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ ,ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು.
    ನೆಸ್ಟ್ಲೆ ಸಂಸ್ಥೆ:
    ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದ್ದಾರೆ.

    ಮೆಗಾ ಡಾಟಾ ಸೆಂಟರ್:
    ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿಇಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
    ಬೆಂಗಳೂರಿನಲ್ಲಿ ಐಕಿಯ ಸ್ಟೋರ್
    ಇಂಗ್ಕಾ ಗ್ರೂಪ್ (ಐಕಿಯ) ಸಿ.ಇ.ಓ. ಜೆಸ್ಪರ್ ಬ್ರಾಡಿನ್ ಅವರು ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಜೂನ್‍ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಇದೇ ಸಂದರ್ಭದಲ್ಲಿ ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತೂ ಸಹ ಚರ್ಚಿಸಲಾಯಿತು.
    ಆಕ್ಸಿಸ್ ಬ್ಯಾಂಕ್ :
    ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಸಲಹೆ ನೀಡಲಾಯಿತು.

    ನೋಕಿಯಾ ಸಂಸ್ಥೆ :

    ಕರ್ನಾಟಕದಲ್ಲಿ ಟೆಲಿಕಾಂ ಉತ್ಪನ್ನಗಳ ಉತ್ಪಾದನೆಯ ಅವಕಾಶಗಳನ್ನು ಬಳಸಿಕೊಳ್ಳಲು ನೋಕಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಸಲಹೆ ನೀಡಲಾಯಿತು.

    ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್ ನಲ್ಲಿ ಹೀರೋ ಮೋಟೋಕಾರ್ಪ್ , ಎ ಬಿ ಇನ್ ಬೇವ್ ಸಂಸ್ಥೆ, ಅರ್ಸೆಲರ್ ಮಿತ್ತಲ್, ಅದಾನಿ ಗ್ರೂಪ್ ,ಜಾನ್ಸನ್ ಕಂಟ್ರೋಲ್ಸ್ ನ ಸಿ ಇ ಓ ಜಾರ್ಜ್ ಒಲಿವರ್, ಹನಿವೆಲ್ ಕಂಪೆನಿ, ಐಬಿಎಂ, ಬೈಜೂಸ್ , ಮೀಶೋ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗಳ ಅವಕಾಶಗಳ ಬಗ್ಗೆ ಮಾತುಕತೆ ನಡೆಸಿದರು.

    ಈ ಸಂದರ್ಭದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಭಾಗವಹಿಸಿ ಈಶ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಚರ್ಚಿಸಿ, ರಾಜ್ಯದಲ್ಲಿ ಪರಿಸರ ಹಾಗೂ ಮಣ್ಣಿನ ಸಂರಕ್ಷಣೆ ಕುರಿತು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

    ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ, ಬಿಟಿ, ಉನ್ನತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮೊದಲಾದ ಹಿರಿಯ ಅಧಿಕಾರಿಗಳು ರಾಜ್ಯದ ತಂಡದಲ್ಲಿದ್ದರು

    Yoga Day :ಮೈಸೂರಿಗೆ ಪ್ರಧಾನಿ ಆಗಮನ-ಯೋಗ ಕಾರ್ಯಕ್ರಮ ಯಶಸ್ವಿಗೆ ಸಮಿತಿ ರಚನೆ

    MYSURU MAY 24

    ಜೂ.21ರ ವಿಶ್ವ ಯೋಗ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವುದರಿಂದ ಯೋಗ ಕಾರ್ಯಕ್ರಮ ಯಶಸ್ವಿಗೊಳಿಸಲು ಸಮಿತಿ ರಚಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

    ನಗರದ ಖಾಸಗಿ ಹೋಟೆಲ್‌ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಎಲ್ಲಾ ಪಕ್ಷದ ಶಾಸಕರು, ಸಂಸದರು, ಯೋಗ ತರಗತಿಗಳ ಮುಖ್ಯಸ್ಥರನ್ನು ಸಮಿತಿ ಒಳಗೊಂಡಿರಲಿದೆ ಎಂದರು.

    ಯೋಗ ಕಾರ್ಯಕ್ರಮದ ಸ್ಥಳ ಇನ್ನೂ ಅಂತಿಮವಾಗಿಲ್ಲ. ಮೇ 30ಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಭೇಟಿ ನೀಡಲಿದ್ದು ಅವರೊಂದಿಗೆ ಕಾರ್ಯಕ್ರಮದ ಕುರಿತು ಚರ್ಚಿಸಿ ಸ್ಥಳ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

    ಮೊದಲ ಬಾರಿಗೆ ಪ್ರಧಾನಿಗಳು ಆಗಮಿಸುತ್ತಿರುವುದರಿಂದ ಕಾರ್ಯಕ್ರಮದಲ್ಲಿ
    ಯಾವುದೇ ಲೋಪವಾಗದಂತೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ರಚನೆಯಾಗುವ ಸಮಿತಿ
    ಕ್ರಮವಹಿಸುತ್ತದೆ. ಈ ಕಾರ್ಯಕ್ರಮ ವಿಶ್ವದಾದ್ಯಂತ ಪ್ರಸಾರವಾಗಲಿದೆ. ಇದರಿಂದ ಸಾಂಸ್ಕೃತಿಕ ನಗರಿಯ ಖ್ಯಾತಿ ವಿಶ್ವಕ್ಕೆ ಪಸರಿಸಲಿದೆ. ಮೈಸೂರಿನ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗಲಿದೆ ಎಂದರು.

    ಬೆಂಗಳೂರು, ಮಂಡ್ಯ ಸೇರಿದಂತೆ ನಾನಾ ಜಿಲ್ಲೆಗಳ ಯೋಗ ತರಗತಿಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ಸುಕತೆ ತೋರುತ್ತಿದ್ದಾರೆ. ಸ್ಥಳ ಅಂತಿಮವಾದ ಬಳಿಕ ಎಷ್ಟು ಸಂಖ್ಯೆಯಲ್ಲಿ ಯೋಗಪಟುಗಳನ್ನು ಸೇರಿಸಬಹುದು ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ನಾಗೇಂದ್ರ, ರಾಮದಾಸ್, ಮೂಡಾ ಅಧ್ಯಕ್ಷರಾದ ರಾಜೀವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    Karnataka MLC Polls :ಪರಿಷತ್ ಚುನಾವಣೆ : ವಿಜಯೇಂದ್ರಗೆ ಸಿಗದ ಬಿಜೆಪಿ ಟಿಕೆಟ್

    NEW DELHI MAY 24

    ರಾಜ್ಯ ವಿಧಾನಪರಿಷತ್ ಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು ಬಿಎಸ್ ವೈ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಟಿಕೆಟ್ ಸಿಕ್ಕಿಲ್ಲ.

    ಚಲುವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯ್ಕ್, ಎಸ್ ಕೇಶವ ಪ್ರಸಾದ್ ಮತ್ತು ಲಕ್ಷ್ಮಣ ಸವದಿ ಅವರು ವಿಧಾನ ಸಭೆಯಿಂದ ನಡೆಯುವ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಮತ್ತು ಶಿಕ್ಷಕರ ಕ್ಷೇತ್ರದಿಂದ ಬಸವರಾಜ ಹೊರಟ್ಟಿ ಅವರನ್ನು ಕಣಕ್ಕೆ ಇಳಿಸಲಾಗಿದೆ.

    error: Content is protected !!