27.9 C
Karnataka
Sunday, May 24, 2026
    Home Blog Page 82

    ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಕ್ರಮ

    ಅಕ್ರಮ ಗಣಿಗಾರಿಕೆಯಲ್ಲಿ ಇಲಾಖೆಯ ಅಧಿಕಾರಿಗಳು ಭಾಗಿಯಾಗಿರುವುದು ಕಂಡು ಬಂದರೆ ತಕ್ಷಣವೇ ಅಂತಹವರನ್ನು ಸೇವೆಯಿಂದ ಅಮಾನತು ಪಡಿಸಿ, ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್‌ ನಿರಾಣಿ ಅವರು ಎಚ್ಚರಿಸಿದ್ದಾರೆ.

    ಸೋಮವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ವಾರ ಮಂಡ್ಯ ಜಿಲ್ಲೆಯ ಗಣಿಗಾರಿಕೆ ನಡೆಯುವ ಪ್ರದೇಶಗಳಿಗೆ ಸಂಸದರು, ,ಶಾಸಕರು , ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮಾಧ್ಯಮದರವರ ಜೊತೆ ಖುದ್ದು ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

    ಒಂದು ವೇಳೆ ಭೇಟಿಯ ಸಂದರ್ಭದಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ಶಾಮಿಲಾಗಿರುವುದು ಕಂಡು ಬಂದರೆ ಅಂತಹವರನ್ನು ಸ್ಥಳದಲ್ಲಿಯೇ ಅಮಾನತು ಪಡಿಸುತ್ತೇನೆ. ನಮ್ಮ ಸರ್ಕಾರ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದಕ್ಕೆ ಜಗ್ಗದೆ ಕಾನೂನು ಕ್ರಮ ಜರುಗಿಸುತ್ತದೆ ಎಂದು ತಿಳಿಸಿದರು.

    ಕಳೆದ ಪೆಬ್ರವರಿ 22ರಂದು ನಾನೆ ಮಂಡ್ಯ ಜಿಲ್ಲೆಯ ಗಣಿಗಾರಿಕೆ ಪ್ರದೇಶಗಳಿಗೆ ಸಂಸದರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಕಳೆದ ಮೂರು ತಿಂಗಳಿಂದ ಕೆ.ಆರ್‌.ಎಸ್‌ ಅಣೆಕಟ್ಟಿನ ಸುತ್ತಮುತ್ತಲ 15 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಕಾರಿಕೆ ನಡೆಸಲು ಅವಕಾಶ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

    ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಕಾರಿಕೆ ನಡೆಯುತ್ತದೆ ಎಂದು ಸಂಸದರು ನಮ್ಮ ಗಮನಕ್ಕೆ ತಂದ ಕೂಡಲೇ ಖುದ್ದು ನಾನೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಆತಂಕ ಬೇಡ ಎಂದು ಸಚಿವ ನಿರಾಣಿ ಅವರು ಭರವಸೆ ಕೊಟ್ಟರು.

    ಮಂಡ್ಯ ಜಿಲ್ಲೆಯಲ್ಲಿ ಒಟ್ಟು 38 ಗಣಿಗಾರಿಕೆಗಳನ್ನು ನಿಲ್ಲಿಸಿದ್ದೇವೆ. ಜಿಲ್ಲಾಡಳಿತ ಹಾಗೂ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನೀಡಿರುವ ವರದಿ ಪ್ರಕಾರ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಣಿಗಾರಿಕೆ ನಡೆಯುತ್ತಿಲ್ಲ. ಒಂದು ವೇಳೆ ನಮ್ಮ ಗಮನಕ್ಕೆ ಬಂದರೆ ತಕ್ಷಣವೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

    ಕೆ ಆರ್‌ ಎಸ್‌ ಅಣೆಕಟ್ಟಿನ ಸುತ್ತಮುತ್ತಲೂ ಪ್ರಾಯೋಗಿಕ ಸ್ಪೋಟ

    ಪುಣೆಯಲ್ಲಿರುವ ಕೇಂದ್ರ ಜಲ ಮತ್ತು ಇಂಧನ ಸಂಶೋಧನಾ ಸಂಸ್ಥೆ ಮೂಲಕ ಕೆ ಆರ್‌ ಎಸ್‌ ಅಣೆಕಟ್ಟಿನ ಸುತ್ತಮುತ್ತಲೂ ಪ್ರಾಯೋಗಿಕವಾಗಿ ಸ್ಪೋಟಕ ವಸ್ತಗಳನ್ನು ಬಳಸುವ ಕುರಿತಾಗಿ ಪರೀಕ್ಷೆ ನಡೆಸಲು ತೀಮಾನಿಸಲಾಗಿದೆ. ಇದರಿಂದ ಎಷ್ಟು ಪ್ರಮಾಣದಲ್ಲಿ ಸ್ಪೋಟಕಗಳನ್ನು ಬಳಕೆ ಮಾಡಬಹುದು? ಇದರಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ ಎಂದರು. ಈ ಹಿಂದೆಯೇ ಇದು ನಡೆಯಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ ವಿಳಂಬವಾಗಿದೆ. ತಕ್ಷಣವೇ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.

    ಸುಮಲತಾ ಅಂಬರೀಶ್ ಮನವಿ

    ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಪ್ರದೇಶಗಳಲ್ಲಿ
    ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಲೋಕಸಭಾ ಸದಸ್ಯರಾದ ಶ್ರೀಮತಿ ಸುಮಲತಾ ಅಂಬರೀಶ್ ಅವರು ಇಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಶ್ರೀ ಮುರುಗೇಶ್ ನಿರಾಣಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು

    ಗಣಿಗಾರಿಕೆ ನಿಷೇಧಕ್ಕೆ ನಾರಾಯಣ ಗೌಡ ಒಲವು

    ಕೆ ಆರ್ ಎಸ್ ಡ್ಯಾಂ ಸುತ್ತ ಕಲ್ಲುಗಣಿಗಾರಿಕೆಯನ್ನೇ ನಿಲ್ಲಿಸಬೇಕು. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ, ಡ್ಯಾಂ ಇರುವ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಮಾಡಲು ಅವಕಾಶವಿದೆ. ತಕ್ಷಣವೆ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಯು ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

    ಬಿಯಾಂಡ್‌ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ

    ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹುಬ್ಬಳ್ಳಿಯಲ್ಲಿ ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗಿದೆ ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

    ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಸರಕಾರ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ (esdm) ನೀತಿಯನ್ನು ಜಾರಿಗೆ ತಂದಿದ್ದು ಅದರ ಮೂಲಕ ಹಲವಾರು ಕಂಪನಿಗಳು ಹುಬ್ಬಳ್ಳಿಗೆ ಬಂದಿವೆ ಎಂದರು.

    ಈ ಭಾಗದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ದಿಕ್ಕಿನಲ್ಲಿ ಬಹಳಷ್ಟು ಪ್ರಗತಿ ಆಗುತ್ತಿದೆ. ಮುಖ್ಯವಾಗಿ ಇಎಸ್‌ಡಿಎಂ ಕ್ಷೇತ್ರದಲ್ಲಿ ಮಹತ್ವದ ಅಭಿವೃದ್ಧಿ ಕಾಣುತ್ತಿದೆ. ಇನ್ನಷ್ಟು ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಡಿಸಿಎಂ ಅವರು ಹೇಳಿದರು.

    ʼಬಿಯಾಂಡ್‌ ಬೆಂಗಳೂರುʼ ಮೂಲಕ ಬೆಂಗಳೂರು ಹೊರಗಿನ ನಗರಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಅದರ ಮೂಲಕವೇ ಮತ್ತಷ್ಟು ಕಂಪನಿಗಳು ಹುಬ್ಬಳ್ಳಿಗೆ ಬರಲಿವೆ. ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ನಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳು ಬೆಳೆಯಲು ಬಹಳಷ್ಟು ಸಹಕಾರಿ ಆಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ದೊಡ್ಡ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

    ಹಿನ್ನಡೆ ಆಗಿಲ್ಲ:ಹುಬ್ಬಳ್ಳಿ ಭಾಗದಲ್ಲಿ ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಹಿನ್ನಡೆಯಾಗಿಲ್ಲ. ಮಾರುಕಟ್ಟೆಗೆ ತಕ್ಕಂತೆ ಕೆಲ ವ್ಯತ್ಯಾಸಗಳಾಗುತ್ತವೆಯೇ ವಿನಾ, ಅದನ್ನು ಹಿನ್ನಡೆ ಎನ್ನಲಾಗದು. ಇನ್ಫೋಸಿಸ್‌, ದೇಶಪಾಂಡೆ ಫೌಂಡೇಶ್‌ ವತಿಯಿಂದ ಈ ಭಾಗದಲ್ಲಿ ಇನ್ನೂ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಈ ಭಾಗದ ಬೆಳವಣಿಗೆಗೆ ಭಾರೀ ಕೊಡುಗೆ ನೀಡಲಿದೆ ಎಂದು ಡಿಸಿಎಂ ಹೇಳಿದರು

    ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 14.33 ಕೋಟಿ ರೂಪಾಯಿ

    ಒಟ್ಟು 14. 33 ಕೋಟಿ ರೂಪಾಯಿ ವೆಚ್ಚದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅನುಮೋದನೆ ನೀಡಲಾಯಿತು.

    2021- 22 ನೇ ಸಾಲಿಗೆ ಅನ್ವಯವಾಗುವಂತೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಕಾಗಿನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರ, ವಸ್ತುಸಂಗ್ರಹಾಲಯದ ಮುಂದುವರಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು, ಬಾಡ ಗ್ರಾಮದಲ್ಲಿ ಸಂಗೀತ ಕಾರಂಜಿ ಹಾಗೂ ಕನಕದಾಸರ ಅರಮನೆಯ ದರ್ಬಾರ್ ಹಾಲ್ ನಲ್ಲಿ ದಾಸಕೂಟ ಸಂಯೋಜನೆ, ಕನಕದಾಸರ ಕುರಿತು ಹಾಲೋಗ್ರಾಂ ಚಲನಚಿತ್ರ ನಿರ್ಮಾಣ ಕಾಮಗಾರಿಗಳ ಕ್ರಿಯಾಯೋಜನೆಗೆ ಇಂದು ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

    ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರಕ್ಕೆ 65 ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆಗೆ ಇಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅನುಮೋದನೆ ನೀಡಿದರು.

    ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ನಿರ್ಮಾಣ ಕಾಮಗಾರಿ, ರಾಕ್ ಗಾರ್ಡನ್ ನಿರ್ಮಾಣ, ಕಲ್ಯಾಣ ಮಂಟಪ ನವೀಕರಣ, ನಂದಗಡದಲ್ಲಿ ಸಂಗೊಳ್ಳಿ ರಾಯಣ್ಣ ಮ್ಯೂಜಿಯಂ ವೀರಭೂಮಿ ನಿರ್ಮಾಣ ಕಾಮಗಾರಿ, ರಾಯಣ್ಣನ ಕೆರೆ ಅಭಿವೃದ್ಧಿ ಮಾಡುವ ಕಾಮಗಾರಿಗಳಿಗಾಗಿ ಈ ಹಣವನ್ನು ವಿನಿಯೋಗಿಸುವಂತೆ ಸೂಚಿಸಲಾಯಿತು.

    ಮೊಬೈಲ್ ನೆಟ್-ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ

    ದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬಂಧದಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿಯವರ ಜೊತೆ ಸುದೀರ್ಘವಾಗಿ ಚರ್ಚಿಸಿದರು.

    ಈಗಾಗಲೇ ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರು ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಯವರು ಸಚಿವರ ಗಮನಕ್ಕೆ ತಂದಿದ್ದಾರೆ.

    ಪ್ರಸ್ತುತ ಮಳೆಗಾಲವಾದ್ದರಿಂದ ರಾಜ್ಯದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ ಪರ್ಯಾಯ ಬೋಧನಾ ಕ್ರಮಗಳಾದ ಆನ್ಲೈನ್ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನ ಪಾಠಗಳಿಗೆ ತೊಂದರೆಯಾಗಿರುವುದರಿಂದ ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟವನ್ನು ಕಾಪಾಡಬೇಕಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಕೊರೋನಾ ಕಾಲಘಟ್ಟದಂತಹ ಪರಿಸ್ಥಿತಿಯಲ್ಲಿ ಭೌತಿಕ ಶಾಲಾ ತರಗತಿಗಳು ಆರಂಭವಾಗುತ್ತಿರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರ್ಯಾಯ ಬೋಧನಾ ಕ್ರಮಗಳನ್ನೇ ಅವಲಂಬಿಸಬೇಕಾಗಿದೆ, ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಬೋಧನೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವು ಆನ್ಲೈನ್ ವ್ಯವಸ್ಥೆಯನ್ನೇ ನೆಚ್ಚಿಕೊಂಡಿರುವಂತಹ ಸಂದರ್ಭದಲ್ಲಿ ಮೊಬೈಲ್ ನೆಟ್-ವರ್ಕ್ನ್ನು ಬಲಪಡಿಸುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಎಲ್ಲರಂತೆ ಶಿಕ್ಷಣ ದೊರೆತು ಕಲಿಕಾ ನಿರಂತರತೆಯಲ್ಲಿ ಅವರನ್ನು ತೊಡಗಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

    ಈ ಕುರಿತು ಮುಖ್ಯಮಂತ್ರಿಯವರೂ ಸಹ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಯುದ್ಧೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ:

    ಡಿಜಿಟಲ್ ಶಿಕ್ಷಣ ಇಲ್ಲವೇ ಆನ್ಲೈನ್ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಈ ಸಂಬಂಧದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಸಲಹೆಗಾರರಾದ ಪ್ರಶಾಂತ್ ಪ್ರಕಾಶ್ ಮತ್ತು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರರಾದ ಪ್ರೊ. ದೊರೆಸ್ವಾಮಿಯವರೊದಿಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಚರ್ಚಿಸಿದ ಸಚಿವರು, ರಾಜ್ಯದಲ್ಲಿರುವ 5766 ಗ್ರಾಮಪಂಚಾಯ್ತಿ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ದೂರದರ್ಶನ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ ಎಂದು ತಿಳಿಸಿದ್ದಾರೆ.

    ಈ ಸಂಬಂಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಗ್ರಾಮೀಣ ಮಕ್ಕಳ ಶಿಕ್ಷಣ ಮುಂದುವರಿಕೆ ಮತ್ತು ಕಲಿಕಾ ನಿರಂತರತೆಗೆ ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

    ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಉತ್ತಮಗೊಳಿಸುವುದು ಸೇರಿದಂತೆ ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಕುರಿತಂತೆ ಎಸ್ ಎಸ್ ಎಲ್ ಸಿ ಪರೀಕ್ಷಾವಧಿ ಮುಗಿದ ಕೂಡಲೇ ಆರ್.ಡಿ.ಪಿ.ಆರ್. ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಶಿಕ್ಷಣ ಇಲಾಖೆಯ ಟಾಸ್ಕ್ಫೋರ್ಸ್ ಈ ಎಲ್ಲ ಅಂಶಗಳನ್ನು ಅವಲೋಕಿಸಿ ಪ್ರಾಯೋಗಿಕ ಕ್ರಮಗಳ ಕುರಿತಂತೆ ಕ್ರಿಯಾಯೋಜನೆ ರೂಪಿಸಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

    ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಹಾಜರಿದ್ದರು.

    ಪೊಲೀಸ್ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ scene of crime officer ಹುದ್ದೆ ಸೃಷ್ಟಿ

    ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು ದೇಶದಲ್ಲಿಯೇ ಮೊಟ್ಟ ಮೊದಲ ನುರಿತ ಹಾಗೂ ಪರಿಣಿತರ ‘ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ’ ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ದಿನಾಂಕ 13 ಜುಲೈ 2021 ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ scene of crime officer ಹುದ್ದೆಗಳ ಆದೇಶ ಪ್ರತಿಯನ್ನು ಕೊಡಲಿದ್ದಾರೆ.

    ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಅಪರಾಧ ಕೃತ್ಯಗಳ ತನಿಖೆಗೆ ಈ ರೀತಿ ಹೊಸ ಪೊಲೀಸ್ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ.ಯಾವುದಾದರೂ ಒಂದು ಅಪರಾಧ ಕೃತ್ಯ ನಡೆದ ತತಕ್ಷಣ ಘಟನಾ ಸ್ಥಳಕ್ಕೆ ಹೋಗಿ ಇಲ್ಲಿರುವಂತಹ ಸಾಕ್ಷಾಧಾರಗಳನ್ನು ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಸಂರಕ್ಷಣೆ ಮಾಡಲು ಈ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗುವುದು.

    ಇದುವರೆಗೆ ಈ ಕೆಲಸವನ್ನು ಸ್ಥಳೀಯ ಅಧಿಕಾರಿಗಳು ಮಾಡುತ್ತಿದ್ದರು. ಆದರೆ ಇನ್ನು ಮುಂದೆ ಮೊದಲ ಹಂತದಲ್ಲಿ ಗಂಭೀರ ಸ್ವರೂಪದ ಅಪರಾಧಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ದಲ್ಲಿ ವಿಶೇಷ ತರಬೇತಿ ಪಡೆದ ಈ ತಂಡ ಅಪರಾಧ ಕೃತ್ಯ ನಡೆದ ಸ್ಥಳಕ್ಕೆ ಮೊದಲು ಭೇಟಿ ನೀಡಲಿದೆ. ಆ ಸ್ಥಳದಲ್ಲಿನ ಎಲ್ಲ ಸಾಕ್ಷಾಧಾರಗಳನ್ನು ಸಂರಕ್ಷಣೆ ಮಾಡುವುದು, ಆನಂತರ ಸಾಕ್ಷಾಧಾರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಡುವುದು, ತನಿಖಾಧಿಕಾರಿಗೆ ಆ ಸಾಕ್ಷಾಧಾರಗಳನ್ನು ಒದಗಿಸುವುದು ಸೇರಿದಂತೆ ಇತರ ಅವಶ್ಯ ಕರ್ತವ್ಯಗಳನ್ನು ಮಾಡುತ್ತಾ ಅಪರಾಧಿಗಳನ್ನು ಅತ್ಯಂತ ಶ್ರೀಘ್ರದಲ್ಲಿ ಪತ್ತೆ ಮಾಡಲು ಮೂಲಭೂತವಾಗಿ ಬೇಕಾಗುವ ಎಲ್ಲ ಕೆಲಸ ಕಾರ್ಯಗಳನ್ನು ಈ ಅಧಿಕಾರಿಗಳು ಮಾಡುತ್ತಾರೆ ಎಂದು ಬೊಮ್ಮಾಯಿ ನೂತನ ಹುದ್ದೆ ಬಗ್ಗೆ ತಿಳಿಸಿದರು.

    ಇದರಿಂದ ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣ ಸಾಧ್ಯ. ಈ ವ್ಯವಸ್ಥೆಯ ಪ್ರಮುಖವಾಗಿ ವಿದೇಶಗಳಲ್ಲಿ ಹೆಚ್ಚಾಗಿ ಇದೆ.ಪ್ರಥಮ ಹಂತದಲ್ಲಿ 206 ಜನ ನುರಿತ ಅಧಿಕಾರಿಗಳ ಹುದ್ದೆಗಳನ್ನು ಮಂಜೂರು ಮಾಡಿದ್ದು, ನಾಳೆ ಈ ಸಂಬಂಧ ಅಧಿಕೃತವಾಗಿ ಸರ್ಕಾರಿ ಆದೇಶವನ್ನು ಮುಖ್ಯಮಂತ್ರಿಗಳು ಗೃಹ ಇಲಾಖೆಗೆ ಕೊಡ ಮಾಡಲಿದ್ದಾರೆ

    ಇದೇ ಸಂದರ್ಭದಲ್ಲಿ ಪೊಲೀಸರ ಆರೋಗ್ಯ ಕಾಪಾಡುವ ಆರೋಗ್ಯ ಭಾಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇರುವ ಕೈಪಿಡಿಯನ್ನು ಪೊಲೀಸ್ ಸಿಬ್ಬಂದಿಗೆ ನೀಡಲು ಮುಖ್ಯ ಮಂತ್ರಿಗಳು ಬಿಡುಗಡೆ ಮಾಡಲಿದ್ದಾರೆ.ಅದೇ ರೀತಿ ಪೊಲೀಸರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ವಿದ್ಯಾನಿಧಿ – 2 ಯೋಜನೆಗೆ ಸಿಎಂ ಚಾಲನೆ ಕೊಡುತ್ತಾರೆ.ಇದಷ್ಟೇ ಅಲ್ಲದೆ ಅಗ್ನಿಶಾಮಕ ದಳ, ಗೃಹರಕ್ಷಕ ದಳ ಹಾಗೂ ಇತರ ಪೊಲೀಸ್ ಸೇವಾ ಪದಕಗಳನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ರದಾನ ಮಾಡಲಿದ್ದಾರೆ.

    ಈ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಿರುವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಕೋರುತ್ತೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

    ಸರಕಾರಿ ಕಾಲೇಜುಗಳಲ್ಲಿ ಈ ವರ್ಷದಿಂದಲೇ ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ

    2030ರ ಹೊತ್ತಿಗೆ ಹೊಸ ರಾಷ್ಟೀಯ ಶಿಕ್ಷಣ ನೀತಿಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರಕಾರಿ ಕಾಲೇಜುಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

    ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞರೊಂದಿಗೆ ನಡೆಸಿದ ಚರ್ಚೆಯ ವೇಳೆ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಿಂದಲೇ ನೂತನ ಶಿಕ್ಷಣ ನೀತಿ ಜಾರಿ ಮಾಡುವ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸ್ವ ಇಚ್ಛೆಯಿಂದ ಯಾರೇ ಮುಂದೆ ಬಂದು ಜಾರಿ ಮಾಡಿದರೂ ಸರಕಾರ ಅವಕಾಶ ನೀಡಲಿದೆ ಎಂದರು.

    ಶಿಕ್ಷಣ ನೀತಿಯನ್ನು ಆಮೂಲಾಗ್ರವಾಗಿ ಜಾರಿ ಮಾಡಲು 15 ವರ್ಷ ಕಾಲಾವಕಾಶ ಕೇಂದ್ರ ಸರಕಾರ ನೀಡಿದೆ. ಆದರೆ, 10 ವರ್ಷಗಳ ಅವಧಿಯಲ್ಲೇ ಜಾರಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿ ಎಲ್ಲ ಕೆಲಸಗಳನ್ನು ಕೈಗೆತ್ತಿಕೊಂಡಿದೆ. 2040ರ ಹೊತ್ತಿಗೆ ರಾಜ್ಯವೂ ಸೇರಿ ಇಡೀ ದೇಶದ ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣವಾಗಿ ಬದಲಾಗಿಬಿಟ್ಟಿರುತ್ತದೆ ಎಂದು ಅವರು ತಿಳಿಸಿದರು.

    ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಎಲ್ಲ ವಿಷಯಾವಾರು ಸಮಿತಿಗಳನ್ನು ರಚನೆಗಳನ್ನು ಆ ಬಗ್ಗೆ ಕಾರ್ಯಚೌಕಟ್ಟು ನಿಗದಿಪಡಿಸಿ ವರದಿ ನೀಡುವಂತೆ ಕೋರಲಾಗಿದೆ. ಆ ವರದಿಗಳೆಲ್ಲ ಕೈ ಸೇರಿದ ಕೂಡಲೇ ಜಾರಿಯ ಪ್ರಕ್ರಿಯೆಗಳನ್ನು ಶುರು ಮಾಡಲಾಗುವುದು ಎಂದು ಅವರು ಹೇಳಿದರು.

    ಶಿಕ್ಷಣ ನೀತಿ ಜಾರಿ ಮಾಡುವ ಪ್ರಕ್ರಿಯೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು. ಈಗಾಗಲೇ ರಾಜ್ಯದಲ್ಲಿ ಡಿಜಿಟಲ್‌ ಕಲಿಕೆ ಮತ್ತು ಬೋಧನೆ ಅತ್ಯುತ್ತಮವಾಗಿ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಈ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ ಎಂದು ಡಿಸಿಎಂ ಹೇಳಿದರು.

    ವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ, ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಡಾ.ಬಿ.ಟಿ.ತಿಮ್ಮೇಗೌಡ, ವಿಧಾನ ಪರಿಷತ್‌ ಸದಸ್ಯ ಎಸ್ ವಿ ಸಂಕನೂರ್‌, ಕಾನೂನು ವಿವಿ ಕುಲಪತಿ ಪ್ರೊ.ಈಶ್ವರ ಭಟ್‌, ಧಾರವಾಡ ಕೃಷಿ ವಿಜ್ಞಾನ ವಿವಿ ಕುಲಪತಿ ಡಾ.ಚೆಟ್ಟಿ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

    ‘ಸನ್ನಿ’ಯನ್ನು ಕಳೆದು ಕೊಂಡ ಗೃಹ ಸಚಿವರ ಕುಟುಂಬ ದುಃಖ ತಪ್ತ

    ಸಾಕು ಪ್ರಾಣಿಗಳ ಹಾಗೆ. ಮನುಷ್ಯರನ್ನು ತುಂಬಾ ಹಚ್ಚಿಕೊಳ್ಳುತ್ತವೆ. ಹಾಗೆ ಮನುಷ್ಯರು ಕೂಡ ಅವನ್ನು ತಮ್ಮ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಾರೆ. ಮನುಷ್ಯರಿಗೆ ಹೋಲಿಸಿದಾಗ ಅವುಗಳ ಜೀವಿತಾವಧಿ ಕಡಿಮೆ. ಹೀಗಾಗಿ ಅವುಗಳ ಅಗಲಿಕೆ ತೀವ್ರ ನೋವು ಸಂಕಟ ತರುತ್ತವೆ.

    ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಮನೆಯಲ್ಲೂ ಹೀಗೆ ಆಗಿದೆ. ಅವರ ಕುಟುಂಬದವರೆಲ್ಲಾ ಪ್ರೀತಿ ಪಾತ್ರವಾಗಿದ್ದ ಸಾಕು ನಾಯಿ ಸನ್ನಿ ಇದು ವಯೋಸಹಜವಾಗಿ ಮೃತ ಪಟ್ಟಿದೆ. ಹೀಗಾಗಿ ಗೃಹ ಸಚಿವರ ಇಡೀ ಕುಟಂಬ ದುಃಖ ತಪ್ತವಾಯಿತು.

    ತಮ್ಮ ಕುಟುಂಬದ ಒಬ್ಬ ಸದಸ್ಯನಂತೆ ಇದ್ದ ಸನ್ನಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಇಡೀ ಕುಟುಂಬ ಸಂಪ್ರದಾಯ ಬದ್ಧವಾಗಿ ಅಂತಿಮ ವಿದಾಯ ಹೇಳಿದೆ.

    ಮಳೆ ಬಂತು ಮಳೆ


    ಕಳೆದ ವರ್ಷ ಇದೇ ದಿನ ಪ್ರಕಟವಾಗಿದ್ದ ಈ ಲೇಖನ ಮಳೆಯ ಸೊಬಗನ್ನು ಸುಂದರವಾಗಿ ಕಟ್ಟಿ ಕೊಟ್ಟಿತ್ತು. ಈಗಲೂ ಹಾಗೆಯೇ ಮೂರು ವಾರ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರುವಾಗಿದೆ. ಈ ನೆಪದಲ್ಲಿ ಈ ಲೇಖನವನ್ನು ಪುನ ಪ್ರಕಟಿಸುತ್ತಿದ್ದೇವೆ. ಮಳೆಯ ಸಿಂಚನದ ನಡುವೆ ಬೆಚ್ಚಗಿನ ಓದು ನಿಮ್ಮದಾಗಲಿ


    ಮಳೆ ಮತ್ತು ಇಳೆಗೆ ಪ್ರೀತಿಯ ಬಂಧ. ಏಪ್ರಿಲ್ ತಿಂಗಳ ಬಿಸಿಲ ಧಗೆಗೆ ಮೈಸುಟ್ಟುಕೊಂಡಂತಿದ್ದ ನೆಲ, ಮರಗಿಡಗಳು, ಚಿಗುರೊಡೆದು ನಳನಳಿಸುವುದು ಮಳೆಯ ಸಿಂಚನದಿಂದಲೇ. ಮಳೆಗಾಲದಲ್ಲಿ ಪ್ರಕೃತಿ ಹಸಿರು ಹೊದ್ದು ಮಲಗಿದಂತಿರುತ್ತದೆ. ಭತ್ತದ ಬೇಸಾಯ ಆರಂಭಗೊಳ್ಳುವುದು ಮಳೆಗಾಲದಲ್ಲಿಯೇ. ಹಾಗಾಗಿ ಮಳೆಗಾಲದಲ್ಲಿ ಮಲೆನಾಡು ಚಟುವಟಿಕೆಯಿಂದಲೇ ಕೂಡಿರುತ್ತದೆ. ಮಳೆಗಾಲಕ್ಕೆ ಬೇಕಾದ ಸಿದ್ಧತೆಗಳನ್ನು ಆಗಲೇ ಮಾಡಿಕೊಂಡಿರುತ್ತಾರೆ. ಮಲೆನಾಡಲ್ಲಿ ಬಿರುಸಾಗಿ ಸುರಿವ ಮಳೆಗೆ ಅಲ್ಲಿನವರು ಒಂದು ರೀತಿಯಲ್ಲಿ ಒಗ್ಗಿಕೊಂಡಿರುತ್ತಾರೆ. ಹಾಗಾಗಿ ಬಿಡದೇ ಸುರಿವ ಮಳೆ ಎಂದೂ ಕಿರಿಕಿರಿ ಎನ್ನಿಸುವುದಿಲ್ಲ. ಮಳೆಗಾಲಕ್ಕೆಂದೇ ತಯಾರಿಸಿಟ್ಟ ಹಲಸಿನಕಾಯಿ ಹಪ್ಪಳ, ಚಿಪ್ಸ್, ಸಂಡಿಗೆಗಳು ಜಿಟಿ ಜಿಟಿ ಸುರಿವ ಸಂಜೆಯ ಮಳೆಗೆ ಸಾಥ್ ನೀಡುತ್ತವೆ.

    ಮಲೆನಾಡಿನಲ್ಲಿ ಮಳೆಗಾಲ ಅಂದರೆ ಅದೇನೋ ಸಂಭ್ರಮ. ಪ್ರಕೃತಿಯಲ್ಲಿ ಸಿಗುವ ಕಣಿಲೆ, ಚಗಟೆ ಸೊಪ್ಪು, ಪತ್ರೋಡೆ, ಮೊಳಕೆಯೊಡೆದ ಗೇರುಬೀಜ… ಹೀಗೆ ನಿತ್ಯವೂ ಪ್ರಕೃತಿಯಲ್ಲಿ ಅದರಲ್ಲೂ ಮಳೆಗಾಲದಲ್ಲಿ ಮಾತ್ರ ಸಿಗುವ ಆಹಾರ ಪದಾರ್ಥಗಳಿಂದ ತರಹೇವಾರಿ ತಿನಿಸು ತಯಾರಿಸಿ ಸವಿಯುವ ಸಂಭ್ರಮ.

    ಎತ್ತ ನೋಡಿದರೂ ಹಸಿರು. ಅಲ್ಲಲ್ಲಿ ನೀರಿನ ಝರಿಗಳು, ಬತ್ತದ ಒರತೆಗಳು, ಕೆರೆ, ಕುಂಟೆ, ತೋಡುಗಳಲ್ಲಿ ಹರಿಯುವ ನೀರಿನ ಜುಳು ಜುಳು ನಾದ, ರಾತ್ರಿಯಾದರೆ ಸಾಕು ವಟಗುಟ್ಟುವ ಕಪ್ಪೆಗಳು, ಇವು ಪ್ರಕೃತಿಯ ನಡುವೆ ಇರುವವರ ಪಾಲಿಗೆ ಮಳೆಗಾಲದ ಮಾತ್ರ ದಕ್ಕುವ ಸೌಭಾಗ್ಯ.

    ಮಳೆಗಾಲ ಕುರಿತು ಕವಿವರೇಣ್ಯರು ಹಲವಾರು ಹಾಡುಗಳನ್ನು ಬರೆದಿದ್ದಾರೆ. ಹಾಡುಗಳಲ್ಲೆಲ್ಲ ಮಳೆಯ ಬಗೆಗಿನ ವರ್ಣನೆ ಬಲು ಸೊಗಸು. ಮಳೆ ಮಳೆ ಒಲವಿನಾ ಸುರಿಮಳೆ, ಮನ ಹರೆಯದ ನದಿಯಾಗಿದೆ…. ಮಳೆ ಎಲ್ಲರ ಮನಸ್ಸಿಗೂ ಹರೆಯದ ಸ್ಪರ್ಶವನ್ನು ನೀಡುತ್ತದೆ. ಅಂದರೆ ಮಳೆಯನ್ನು ಎಲ್ಲರೂ ಖುಷಿಯಿಂದಲೇ ಅನುಭವಿಸುತ್ತಾರೆ. ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಮಳೆಯನ್ನು ಅನುಭವಿಸದವರಿಲ್ಲ. ಮಳೆ ಮಾಡುವ ಚಮತ್ಕಾರವೇ ಅಂತಹದ್ದು.

    ಜೂನ್ ತಿಂಗಳಿನಲ್ಲಿ ಮಳೆಯ ಆರ್ಭಟ ಜೋರಾಗಿಯೇ ಇರುತ್ತದೆ. ಶಾಲೆ ಆರಂಭವಾಗುವುದೂ ಜೂನ್‍ನಲ್ಲಿಯೇ. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ಕೊರೊನಾ ಕಾರಣದಿಂದ ಮಕ್ಕಳಿಗೆ ಮಳೆಗಾಲವನ್ನು ಸಂಪೂರ್ಣವಾಗಿ ಅನುಭವಿಸುವ ಅವಕಾಶ.

    ಮಕ್ಕಳು ಮಳೆಯಲ್ಲಿ ನೆಪ ಮಾತ್ರಕ್ಕೆ ಕೊಡೆ ಹಿಡಿದು ಆಡುವುದು. ಆದರೆ ಮಳೆ ನೀರಿನಲ್ಲಿ ಪೂರ್ತಿ ಒದ್ದೆಯಾಗಿಸಿಕೊಂಡು ಮೈಮರೆಯುವುದೇ ಸಂಭ್ರಮ. ಗದ್ದೆ ಬದಿಗಳಲ್ಲಿ, ಸಣ್ಣ ಸಣ್ಣ ತೋಡುಗಳಲ್ಲಿ ಚಳಪಳ ಮಾಡಿಸಿಕೊಂಡು, ಒಬ್ಬರ ಮೇಲೊಬ್ಬರು ನೀರೆರಚಿಕೊಂಡು, ಆಟವಾಡಿ ದಿನಕ್ಕೆ ಕನಿಷ್ಟ ಮೂರು ನಾಲ್ಕು ಬಾರಿಯಾದರೂ ಬಟ್ಟೆ ಬದಲಾಯಿಸಿಕೊಳ್ಳದಿದ್ದರೆ ಸಮಾಧಾನವಿಲ್ಲ. ಸರಳೀ ಹಣ್ಣು, ಮೊಗ್ಗರೆಕಾಯಿ, ಚಾಕೋಟೆ ಹಣ್ಣು, ಚೂರಿ ಕಾಯಿ, ಹೀಗೆ ಗುಡ್ಡ ಗಾಡು ಅಲೆದು ಮಕ್ಕಳ ಪಾಲಿನ ಕಾಡಿನ ಸಂಪತ್ತನ್ನು ತಂದು ಸವಿಯುವುದು ಮಳೆಗಾಲದ ಸಂಭ್ರಮ. ಆದರೆ ಮಳೆ ಗಾಳಿಗೆ ಶೀತ, ನೆಗಡಿಯಾದೀತು ಎಂಬ ಭಯ ಹೆತ್ತವರಿಗಷ್ಟೇ.

    ಮಳೆಗಾಲದಲ್ಲಿ ಪ್ರಕೃತಿಯಲ್ಲಿ ಅಮೋಘ ಬದಲಾವಣೆ. ಕಣ್ಣು ಹಾಯಿಸಿದಷ್ಟೂ ದೂರ ಕಾಣುವ ಹಸಿರು ವನ, ಹರಿಯುವ ನದಿಯ ಜುಳು ಜುಳು ನಿನಾದ ಕಣ್ಣಿಗೆ ತಂಪು, ಕಿವಿಗೆ ಇಂಪು. ಗದ್ದೆ ಉಳುವ ಯೋಗಿ, ಭತ್ತ ಬಿತ್ತುವ ಖುಷಿ, ಪುರುಷರು ಮಹಿಳೆಯರು ಸೇರಿ ಗದ್ದೆಯಲ್ಲಿ ಭತ್ತದ ಸಸಿಗಳನ್ನು ನಾಟಿ ಮಾಡುವ ಸಂಭ್ರಮ ಹೀಗೆ…. ಎಲ್ಲವೂ ಕಣ್ಣಿಗೆ ಕಳೆಗಟ್ಟುವುದು ಮಳೆನಾಡು ಎನ್ನಿಸಿಕೊಂಡ ಮಲೆನಾಡಿನಲ್ಲಿ ಮಾತ್ರ ಸಾಧ್ಯ.

    ಕಾಂಕ್ರೀಟ್ ಕಾಡಿನ ನಡುವೆ ಬದುಕುವ ಜೀವಗಳು ಪ್ರಕೃತಿಯ ಸೊಬಗನ್ನು ಪದಗಳಲ್ಲಿ ಕಾಣಬೇಕಷ್ಟೇ. ಅದನ್ನು ಅನುಭವಿಸಲು ಮಲೆನಾಡಿಗೇ ಬರಬೇಕು

    ರಾಜಕೀಯ ಸಂಘಟನೆ ವಿಸರ್ಜಿಸಿದ ರಜನೀಕಾಂತ್

    ತಾವು ಪುನಃ ರಾಜಕೀಯ ಪ್ರವೇಶಿಸುವ ಸಾಧ್ಯತೆಗಳನ್ನು ತಳ್ಳಿ ಹಾಕಿರುವ ನಟ ರಜನೀಕಾಂತ್ ತಾವು ಸ್ಥಾಪಿಸಿದ್ದ ರಜನಿ ಮಕ್ಕಳ್ ಮಂಡ್ರಮ್ (RMM) ಅನ್ನು ವಿಸರ್ಜಿಸಿರುವುದಾಗಿ ಸೋಮವಾರ ಪ್ರಕಟಿಸಿದ್ದಾರೆ.

    ಆದರೆ ಮುಂದಿನ ದಿನಗಳಲ್ಲಿ ಈ ಸಂಘಟನೆಯನ್ನು ಅಭಿಮಾನಿಗಳ ಸಂಘಟನೆಯಾಗಿ ಪುನರ್ ರೂಪಿಸಲಾಗುವುದು ಎಂದು ಹೇಳಿದ್ದಾರೆ.

    ನಾವು ಏನು ನಿರೀಕ್ಷೆ ಮಾಡಿದ್ದೆವೋ ಅದು ಹಲವಾರು ಕಾರಣಗಳಿಂದ ಸಾಧ್ಯ ಆಗಲಿಲ್ಲ. ನನಗೆ ಮುಂದೆಯೂ ರಾಜಕೀಯ ಪ್ರವೇಶಿಸುವ ಯಾವ ಯೋಜನಗೆಳು ಇಲ್ಲ ಎಂದು ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ರಜನೀಕಾಂತ್ ಹೇಳಿದರು.

    ಪದವಿ ಕಾಲೇಜು ಆರಂಭಕ್ಕೆ ಸಿದ್ಧತೆ; ಲಸಿಕೀಕರಣದ ನಂತರ ದಿನಾಂಕ ನಿರ್ಧಾರ

    ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರಕಾರ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಆದರೆ, ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

    ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುವ ಕೆಲಸ ಭರದಿಂದ ಸಾಗುತ್ತಿದೆ. ಲಸಿಕೆ ಕಾರ್ಯ ಮುಗಿಯುತ್ತಿದ್ದಂತೆ ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

    ಕಾಲೇಜುಗಳನ್ನು ತೆರೆಯಲು ಸವಾಲುಗಳಿರುವುದು ನಿಜ. ಆದರೆ ಎಷ್ಟು ದಿನವೆಂದು ಹಾಗೇ ಇರಲು ಸಾಧ್ಯ? ಜೀವನ ಸಾಗುತ್ತಲೇ ಇರಬೇಕು. ಸುರಕ್ಷತೆಯ ಜತೆ ಜತೆಗೇ ಜೀವನ ಸಾಗುತ್ತಿರಬೇಕು. ಈ ನಿಟ್ಟಿನಲ್ಲಿ ಲಸಿಕೆ ಮಾತ್ರವೇ ಪರಿಹಾರ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

    ಮೂರನೇ ಅಲೆ ತಡೆಗೆ ಸಿದ್ಧತೆ

    ಸರಕಾರ ಎಲ್ಲೂ ಮೈಮರೆತಿಲ್ಲ. ಒಂದೆಡೆ ಲಸಿಕೀಕರಣದ ವೇಗ ಹೆಚ್ಚಿಸುತ್ತಲೇ ಇನ್ನೊಂದೆಡೆ ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುತ್ತಿದೆ. ರಾಜ್ಯಾದ್ಯಂತ ಕೋವಿಡ್‌ ಸೋಂಕಿತರಿಗಾಗಿಯೇ 6,000 ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಪ್ರಮಾಣಲ್ಲಿ ವೈದ್ಯರು, ನರ್ಸುಗಳು, ಪ್ಯಾರಾ ಮೆಡಿಕಲ್‌ ಸಿಬ್ಬಂದಿ, ಗ್ರೂಪ್‌ ಡಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಪೈಕಿ 2,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು ಡಾ.ಅಶ್ವತ್ಥನಾರಾಯಣ.

    error: Content is protected !!